Home ರಾಜಕೀಯ Lok Sabha Elections 2024 | ಲೋಕಸಭಾ ಚುನಾವಣೆ: ಶೀಘ್ರವೇ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ: ಡಿ...

Lok Sabha Elections 2024 | ಲೋಕಸಭಾ ಚುನಾವಣೆ: ಶೀಘ್ರವೇ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ: ಡಿ ಕೆ ಶಿವಕುಮಾರ್

48
0
Lok Sabha Elections 2024 | Selection of Potential Candidates Soon: DK Shivakumar
Lok Sabha Elections 2024 | Selection of Potential Candidates Soon: DK Shivakumar

ಹುಬ್ಬಳ್ಳಿ:

ಲೋಕಸಭಾ ಚುನಾವಣೆಯಲ್ಲಿ ಪಕ್ಷ ಎಲ್ಲ ರೀತಿಯ ತಯಾರಿ ಮಾಡಿದ್ದು ಇನ್ನು ನಾಲ್ಕೈದು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ‌ ಕೆ‌ ಶಿವಕುಮಾರ್ ಹೇಳಿದರು ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,

ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ ಎಲ್ಲಿಯವರೆಗೂ ಬಂದಿದೆ ಎಂದು ಮಾಧ್ಯಮಗಳು ಕೇಳಿದಾಗ, “ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೆ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ” ಎಂದು ತಿಳಿಸಿದರು.

ಪಕ್ಷದಲ್ಲಿ ಇರುವ ಅಸಮಾಧಾನ ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂದು ಕೇಳಿದಾಗ, “ನಮ್ಮ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ? ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಅದರಿಂದ ಅವರ ನಾಯಕರ ಆಯ್ಕೆ ಮಾಡಲು ಆಗುತ್ತಿಲ್ಲ. ಈ ಬಗ್ಗೆ ನೀವು ಪ್ರಶ್ನೆ ಮಾಡುತ್ತಿಲ್ಲ. ಸರ್ಕಾರ ರಚನೆ ಆಗಿ ಐದಾರು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಆಗದ ಇತಿಹಾಸವನ್ನು ರಾಜ್ಯ ಅಥವಾ ದೇಶದಲ್ಲಿ ನೋಡಿದ್ದೀರಾ?” ಎಂದು ತಿಳಿಸಿದರು.

ಬಿಜೆಪಿ ಬರ ಅಧ್ಯಯನ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ನಮ್ಮ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಕೃಷ್ಣಭೈರೇಗೌಡ ಅವರು ಅಧ್ಯಯನ ಮಾಡಿ ಸುಮಾರು 200 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಅವರು ಸುಮ್ಮನೆ ಘೋಷಣೆ ಮಾಡಿದ್ದಾರಾ? ಮಂಡ್ಯ, ಹಾವೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಯುತ್ತಿದೆ” ಎಂದು ತಿಳಿಸಿದರು.

ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಹೋಗಿದೆ ನಂತರ ಏನಾಯ್ತು ಎಂದು ಕೇಳಿದಾಗ, “ನಾವು ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ನಾವು ಸಾವಿರ ಕೋಟಿಯಷ್ಟು ಹಣವನ್ನು ಮೀಸಲು ಇಟ್ಟಿದ್ದೇವೆ” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here