ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲಿಸಿದ್ದಾರೆ.
11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಕಲಬುರಗಿ, ಧಾರವಾಡ, ಚಿತ್ರದುರ್ಗ, ಬೆಳಗಾವಿ, ಮಂಡ್ಯ, ದಾವಣಗೆರೆ, ಕೋಲಾರ, ಮೈಸೂರು, ಹಾಸನ ಹಾಗೂ ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
9 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಪ್ರಕರಣಗಳಲ್ಲಿ 9 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಲೋಕಾಯುಕ್ತ ಅಧಿಕಾರಿಗಳು. 100 ಅಧಿಕಾರಿಗಳ ತಂಡ ರಾಜ್ಯದ 56 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಕೋಲಾರದ ತಹಶೀಲ್ದಾರ್ ವಿಜಯಣ್ಣ, ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್ ಎಂ.ರವೀಂದ್ರ, ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್ ಎಂಜಿನಿಯರ್ ಮಹೇಶ್ ಕೆ., ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಕೆ.ಜಿ. ಜಗದೀಶ್, ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ್ ಗೌಡ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಶಿವರಾಜು ಎಸ್., ಬಿಬಿಎಂಪಿ ಕೆಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಗ್ಗಿ, ದಾವಣಗೆರೆಯ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್. ಉಮೇಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಸ್.ಪ್ರಭಾಕರ, ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹದೇವ್ ಬೆನ್ನೂರು, ಹಾಸನದ ಗ್ರಾಮ ಪಂಚಾಯತ್ ಒಂದರ ಗ್ರೇಡ್-1 ಕಾರ್ಯದರ್ಶಿ ಎನ್.ಎಂ. ಜಗದೀಶ್ ಎಂಬವರ ಮನೆ, ಅವರಿಗೆ ಸಂಬಂಧಿಸಿದವರ ಮನೆಗಳು, ಇತರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈ ಎಲ್ಲ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ಎಫ್ ಐಆರ್ ದಾಖಲಿಸಿದೆ