Congress party is in SDPI and PFI's grip: Karnataka Chief Minister Basavaraj Bommai
ಹುಬ್ಬಳ್ಳಿ:
ಭಜರಂಗ ದಳಕ್ಕೆ ಆಂಜನೇಯನಿಗೆ ಏನು ಸಂಬಂಧ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ. ಆಂಜನೇಯನಿಗೂ ಭಜರಂಗ ದಳಕ್ಕಿದೆ ಎಂದು ತಿರುಗೇಟು ನೀಡಿದ್ದಾರೆ.
ಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು. ಜನರ ಭಾವನೆಗಳ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲ ಎಂದರು.
ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ಕಾಂಗ್ರೆಸ್ ಅವರು ಭರವಸೆಗಳ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ. ಅನವಶ್ಯಕವಾಗಿ ಕೆದಕಿ ಕೆದಕಿ ಚುನಾವಣೆಯ ವಾತಾವರಣವನ್ನು ಜಾತಿ, ಧರ್ಮ, ಕೋಮು ಭಾವನೆಗಳ ಮೂಲಕ ಕೆರಳಿಸೋದು ಸರಿಯಲ್ಲ ಇದು ಕಾಂಗ್ರೆಸ್ ನ ತುಷ್ಟೀಕರಣ ರಾಜಕಾರಣ ತೋರ್ಪಡಿಸುತ್ತೆ ಎಂದರು.
