ಬೆಂಗಳೂರು:
ಶನಿವಾರ ಇಲ್ಲಿ ಅಕ್ರಮವಾಗಿ ರೀಫಿಲ್ ಮಾಡುತ್ತಿದ್ದ ಎರಡು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.
ಮೂಡಲಪಾಳ್ಯ ಸಮೀಪದ ಪಂಚಶೀಲನಗರದಲ್ಲಿರುವ ಭಾರತ್ ಭವಾನಿ ಗ್ಯಾಸ್ ಏಜೆನ್ಸಿ ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರಿನ ಗೋವಿಂದರಾಜನಗರ ವಾರ್ಡ್,ಮೂಡಲಪಾಳ್ಯದ ಸರ್ಕಾರಿ ಶಾಲೆ ಹತ್ತಿರ ಎಲ್.ಪಿ.ಜಿ ಸಿಲಿಂಡರ್‌ಗಳಿಗೆ ಬೆಂಕಿಯಾಗಿದ್ದು, ಕೂಡಲೇ ರಾಜಾಜಿನಗರ & ನಾಗರಭಾವಿ ಠಾಣೆಗಳಿಂದ ವಾಹನ & ಅಧಿಕಾರಿ/ಸಿಬ್ಬಂದಿಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿರುತ್ತಾರೆ. ಈ ಘಟನಾ ವೇಳೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. pic.twitter.com/JeE8y7Qx9l
— ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (@KarFireDept) January 8, 2022
ದೊಡ್ಡ ಸಿಲಿಂಡರ್‌ಗಳಿಂದ ಸಾಮಾನ್ಯ ಸಿಲಿಂಡರ್‌ಗಳಿಗೆ ಗ್ಯಾಸ್ ವರ್ಗಾವಣೆ ಮಾಡುವಾಗ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಎರಡು ಸಿಲಿಂಡರ್‌ಗಳು ಸ್ಫೋಟಗೊಂಡು ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅದೃಷ್ಟವಶಾತ್ ಉಳಿದ ಸಿಲಿಂಡರ್‌ಗಳು ಸ್ಫೋಟಗೊಳ್ಳದ ಕಾರಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Also Read: LPG cylinders explode during illegal refilling in Bengaluru, 3 injured
ಗೋವಿಂದರಾಜನಗರ ಪೊಲೀಸರು ಅಕ್ರಮವಾಗಿ ಪೇರಿಸಿಟ್ಟಿದ್ದ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆ ಮಾಡಿದ್ದಾರೆ. ಮಾಲೀಕ ಬೆಟ್ಟಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಏಜೆನ್ಸಿ ಇರುವುದರಿಂದ ಘಟನೆ ಆತಂಕಕ್ಕೆ ಕಾರಣವಾಗಿತ್ತು.
ಬೆಂಗಳೂರಿನ ಕೋಣನಕುಂಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಸದ್ಯಕ್ಕೆ ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಘಟನೆಗೆ ನಿಖರ ಕಾರಣ ಮತ್ತು ಹಾನಿಯ ಬಗ್ಗೆ ಇನ್ನೂ ತಿಳಿದುಬಂದಿಲ್ಲ.
Also Read: Panic as Bengaluru building catches fire, but no casualties