Home ಅಪರಾಧ ಬೆಂಗಳೂರಿನಲ್ಲಿ ಅಕ್ರಮ ರೀಫಿಲ್ಲಿಂಗ್ ವೇಳೆ ಎಲ್‌ಪಿಜಿ ಸಿಲಿಂಡರ್‌ ಸ್ಫೋಟಗೊಂಡು ಮೂವರಿಗೆ ಗಾಯ

ಬೆಂಗಳೂರಿನಲ್ಲಿ ಅಕ್ರಮ ರೀಫಿಲ್ಲಿಂಗ್ ವೇಳೆ ಎಲ್‌ಪಿಜಿ ಸಿಲಿಂಡರ್‌ ಸ್ಫೋಟಗೊಂಡು ಮೂವರಿಗೆ ಗಾಯ

26
0
LPG cylinders explode during illegal refilling in Bengaluru, 3 injured
bengaluru

ಬೆಂಗಳೂರು:

ಶನಿವಾರ ಇಲ್ಲಿ ಅಕ್ರಮವಾಗಿ ರೀಫಿಲ್ ಮಾಡುತ್ತಿದ್ದ ಎರಡು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಮೂಡಲಪಾಳ್ಯ ಸಮೀಪದ ಪಂಚಶೀಲನಗರದಲ್ಲಿರುವ ಭಾರತ್ ಭವಾನಿ ಗ್ಯಾಸ್ ಏಜೆನ್ಸಿ ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

bengaluru

ದೊಡ್ಡ ಸಿಲಿಂಡರ್‌ಗಳಿಂದ ಸಾಮಾನ್ಯ ಸಿಲಿಂಡರ್‌ಗಳಿಗೆ ಗ್ಯಾಸ್‌ ವರ್ಗಾವಣೆ ಮಾಡುವಾಗ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಎರಡು ಸಿಲಿಂಡರ್‌ಗಳು ಸ್ಫೋಟಗೊಂಡು ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅದೃಷ್ಟವಶಾತ್ ಉಳಿದ ಸಿಲಿಂಡರ್‌ಗಳು ಸ್ಫೋಟಗೊಳ್ಳದ ಕಾರಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read: LPG cylinders explode during illegal refilling in Bengaluru, 3 injured

ಗೋವಿಂದರಾಜನಗರ ಪೊಲೀಸರು ಅಕ್ರಮವಾಗಿ ಪೇರಿಸಿಟ್ಟಿದ್ದ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆ ಮಾಡಿದ್ದಾರೆ. ಮಾಲೀಕ ಬೆಟ್ಟಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಏಜೆನ್ಸಿ ಇರುವುದರಿಂದ ಘಟನೆ ಆತಂಕಕ್ಕೆ ಕಾರಣವಾಗಿತ್ತು.

ಬೆಂಗಳೂರಿನ ಕೋಣನಕುಂಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಸದ್ಯಕ್ಕೆ ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಘಟನೆಗೆ ನಿಖರ ಕಾರಣ ಮತ್ತು ಹಾನಿಯ ಬಗ್ಗೆ ಇನ್ನೂ ತಿಳಿದುಬಂದಿಲ್ಲ.

Also Read:  Panic as Bengaluru building catches fire, but no casualties

bengaluru

LEAVE A REPLY

Please enter your comment!
Please enter your name here