ಮೈಸೂರು: ಒಕ್ಕಲಿಗ ಮುಖಂಡರ ಏಳಿಗೆ ಸಹಿಸದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮತ್ತೊಮೆ ಜೈಲಿಗೆ ಕಳುಹಿಸಲು ಸಂಚು ರೂಪಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಬಹಳ ಹತಾಶರಾಗಿ ಒತ್ತಡಕ್ಕೆ ಒಳಗಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಮೈತ್ರಿಯ ಮೊದಲ ಷರತ್ತು ಡಿ.ಕೆ. ಶಿವಕುಮಾರ್ ಅವರನ್ನು ಜೈಲಿಗೆ ಕಳಹಿಸಬೇಕು ಎಂಬುದಾಗಿದೆ ಎಂದು ಹೇಳಿದರು.
Black Tea benefits: ಪ್ರತಿದಿನ ಬ್ಲ್ಯಾಕ್ ಟೀ ಕುಡಿಯುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ..?
ಕುಮಾರಸ್ವಾಮಿ ಅವರಿಗೆ ಧಮ್ಮು, ತಾಕತ್ತು ಇದ್ದರೆ ಜೈಲಿಗೆ ಕಳುಹಿಸಬೇಕು. ಡಿ.ಕೆ. ಶಿವಕುಮಾರ್ ಜೀವ ತೆಗೆಯುವ ಸಂಚು ರೂಪಿಸಿದ್ದಾರೆ. ಇದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಮನವಿ ಕೊಡುತ್ತೇನೆ ಎಂದು ತಿಳಿಸಿದರು. ಕುಮಾರಸ್ವಾಮಿ ಅವರಿಗೆ ತನ್ನ ಅಣ್ಣನ ಮಗನ ಬೆಳವಣಿಗೆ ಸಹಿಸಲಾಗದು. ಭವಾನಿ ರೇವಣ್ಣ ಅವರಿಗೆ ಟಿಕೆಟ್ ತಪ್ಪಿಸಿದರು. ಹಿಂದೆ ಚೆಲುವರಾಯಸ್ವಾಮಿ, ಮಾಗಡಿ ಬಾಲಕೃಷ್ಣ ಬೆಳೆಯೋದು ಸಹಿಸಲಿಲ್ಲ. ಇದನ್ನು ಒಕ್ಕಲಿಗ ಸಮಾಜ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
The post M. Laxman: ಡಿ.ಕೆ.ಶಿವಕುಮಾರ್ ಅವರನ್ನು ಮತ್ತೊಮ್ಮೆ ಜೈಲಿಗೆ ಕಳುಹಿಸಲು ಕುಮಾರಸ್ವಾಮಿ ಸಂಚು ರೂಪಿಸಿದ್ದಾರೆ: ಎಂ.ಲಕ್ಷ್ಮಣ್ ಆರೋಪ appeared first on Ain Live News.