Home ರಾಜಕೀಯ ಬೆಂಗಳೂರಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಮಧ್ಯಪ್ರದೇಶ ಸಿಎಂ

ಬೆಂಗಳೂರಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಮಧ್ಯಪ್ರದೇಶ ಸಿಎಂ

12
0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜ್ಯಪಾಲರನ್ನು ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಅವರು ಭೇಟಿ ಮಾಡಿದ್ದಾರೆ.

ನಾಳೆ ಬೆಂಗಳೂರಿನಲ್ಲಿ ಮೂರನೇ ಸಂವಾದಾತ್ಮಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಮಧ್ಯಪ್ರದೇಶದಲ್ಲಿ ಹೂಡಿಕೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿ ಉತ್ತೇಜಿಸಲು ನಾಳೆ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳಿನ ಸಭೆಯಲ್ಲಿ ಸರ್ಕಾರದ ದೃಷ್ಟಿಕೋನ ಮತ್ತು ನಾವೀನ್ಯತೆಗಳನ್ನು ಎತ್ತಿ ತೋರಿಸುವ ಕೈಗಾರಿಕೋದ್ಯಮಿಗಳನ್ನು ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಭೇಟಿ ಮಾಡಿ ಹೂಡಿಕೆ ಸಂಬಂಧ ಮಹತ್ವದ ಚರ್ಚೆ ಮಾಡಲಿದ್ದಾರೆ. ಇನ್ನು ಇದೇ ಸಭೆಯಲ್ಲಿ ಮಧ್ಯಪ್ರದೇಶದಲ್ಲಿ ಹೂಡಿಕೆ ಮಾಡಲು ಇಚ್ಛಿಸುವ ಕೈಗಾರಿಕೋದ್ಯಮಿಗಳೊಂದಿಗೆ ಮೋಹನ್ ಯಾದವ್ ಅವರು ಮಾತುಕತೆ ನಡೆಸಿ ವಿವಿಧ ವಲಯಗಳಲ್ಲಿ ತಿಳಿವಳಿಕೆ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.

ಇನ್ನು ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ನಾಳೆ ಮೂರನೇ ಸಂವಾದಾತ್ಮಕ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ಮಧ್ಯಪ್ರದೇಶ ಸಿಎಂ ಡಾ.ಮೋಹನ್ ಯಾದವ್, ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಸಂಜೆ ರಾಜಭವನದಲ್ಲಿ ಸೌಹಾರ್ದಯುತವಾಗಿ ಗವರ್ನರ್ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

LEAVE A REPLY

Please enter your comment!
Please enter your name here