ಮಡಿಕೇರಿ:
ಕೆಎಸ್ ಆರ್ ಟಿ ಸಿ ಬಸ್ ವೊಂದು ಸೋಮವಾರ ಬೆಳಿಗ್ಗೆ ಡಿಕ್ಕಿ ಹೊಡೆದು ನಗರದ ಟೋಲ್ ಗೇಟ್ ನಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿದೆ.
ಬಸ್ ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಈ ಬಸ್ ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಪಿಕಪ್ ವಾಹನವೊಂದು ಅಡ್ಡಲಾಗಿ ಬಂದಿದ್ದರಿಂದ ಬಸ್ ಅನ್ನು ಪಕ್ಕಕ್ಕೆ ತಿರುಗಿಸಿದಾಗ ಅಪಘಾತ ಸಂಭವಿಸಿದೆ.


ಅದೃಷ್ಟವಶಾತ್ ಬಸ್‌ನಲ್ಲಿ ಪ್ರಯಾಣಿಕರಿಲ್ಲದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಹಾಗೂ ಕಾರ್ಯನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಬಸ್ ಚಾಲಕ ಕೊಟ್ರೇಶ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದು, ಬಸ್ ಅನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.