Karnataka Caste Census Report | ಸಂಪುಟ ಸಭೆಯಲ್ಲಿ ಏರುಧ್ವನಿಯಲ್ಲಿ ಮಾತುಕಥೆ ಆಗಿದೆ ಎಂಬುದು ಸುಳ್ಳು: ಡಿ.ಕೆ.ಶಿವಕುಮಾರ್
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳೂರಿನ ಶರಾವತಿ ಬಾರ್ ಸಮೀಪ ನಡೆದಿದೆ.
ಮದುರೈ ಮೂಲದ ಅಲಗರಾಜ್(31) ಕೊಲೆಯಾದ ವ್ಯಕ್ತಿಯಾಗಿದ್ದು, ಅರೆನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಘಟನಾ ಸ್ಥಳದಲ್ಲಿ TVS ಎಕ್ಸೆಲ್ ಬೈಕ್, ಹಾಗೂ ತುಪ್ಪದ ಟಿನ್ ಪತ್ತೆಯಾಗಿದ್ದು, ಶವ ಬಿದ್ದಿರುವುದನ್ನು ಬಾಟಲ್, ಚಿಂದಿ ಆಯುವವರು ನೋಡಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು, ಶ್ವಾನದಳ, ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಳೇ ವೈಷಮ್ಯದ ಹಿನ್ನೆಲೆ ತಲೆಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
