Maharashtra CM Eknath Shinde campaigning on behalf of BJP candidates in Kapu and Udupi town
ಬೆಂಗಳೂರು:
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
ಸಿಎಂ ಶಿಂಧೆ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು, ಕಾಪು ಮತ್ತು ಉಡುಪಿ ಪಟ್ಟಣದಲ್ಲಿ ಎರಡು ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಉಡುಪಿ ತಲುಪುವ ಮುನ್ನ ಶಿಂಧೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಉಡುಪಿಯ ಶ್ರೀಕೃಷ್ಣ ದೇವಸ್ಥಾನಕ್ಕೂ ಭೇಟಿ ನೀಡಲಿದ್ದು, ಸೋಮವಾರವೇ ಮಹಾರಾಷ್ಟ್ರಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
