Home ಕರ್ನಾಟಕ ಡೆಲ್ಟಾ ಸೋಂಕು ಸಂಬಂಧ ಸಿಎಂ ಸಚಿವರು ಅಧಿಕಾರಿಗಳೊಂದಿಗೆ ಪರಾಮರ್ಶೆ ಸಭೆ

ಡೆಲ್ಟಾ ಸೋಂಕು ಸಂಬಂಧ ಸಿಎಂ ಸಚಿವರು ಅಧಿಕಾರಿಗಳೊಂದಿಗೆ ಪರಾಮರ್ಶೆ ಸಭೆ

53
0
Advertisement
bengaluru

ಬೆಂಗಳೂರು:

ಸಿಎಂ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ 19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ಸಭೆ ನಡೆಸಿದರು.

ಸಭೆಯಲ್ಲಿ ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿ ದ್ದು ವೈರಸ್ ಬಗ್ಗೆ ತೀವ್ರ ನಿಗಾ ಇಡುವಂತೆಯೂ ಗಡಿಭಾಗದಲ್ಲಿ ಮಹಾರಾಷ್ಟ್ರ ದಲ್ಲಿ ಡೆಲ್ಟಾ ವೈರಸ್ ಕಂಡುಬರುತ್ತಿರುವುದರಿಂದ ಬಾರ್ಡರ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆನು ಸಹ ತೀವ್ರ ನಿಗಾ ಇಟ್ಟು ಅವರನ್ನು ಕರೋನ ಟೆಸ್ಟ್ ಗೆ ಒಳಪಡಿಸುವಂತೆ ಸೂಚಿಸಲಾಯಿತು.

ಕೇರಳ ಹಾಗು ಮಹಾರಾಷ್ಟ್ರದ ಲ್ಲಿ ಎರಡನೇ ಅಲೆಯ ತೀವ್ರತೆ ಕಡಿಮೆಯಾಗದಿರುವ ಆತಂಕ ವ್ಯಕ್ತಪಡಿಸಿ ರಾಜ್ಯದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಗೊಳಿಸಿದರು ಎಚ್ಚರಿಕೆಯಿಂದ ಇರುವಂತೆ ರಾಜ್ಯದ ಜನರಿಗೆ ಮನವಿ ಮಾಡಲಾಯಿತು.

bengaluru bengaluru

ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಪೌಷ್ಟಿಕ ಆಹಾರ ಒದಗಿ ವೈದ್ಯಕೀಯ ‌ನಿಗಾ ವಹಿಸಲು ಸೂಚಿಸಲಾಯಿತು.

ಕಲ್ಯಾಣ ಮಂಟಪ ಹೋಟೆಲ್‌ ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ‌ 40 ಜನ ಕ್ಕೆ ಸೀಮಿತಗೊಳಿಸಿ ಅನುಮತಿ ತೆಗೆದುಕೊಂಡು ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರ ದಿಂದ ಜಾರಿಗೆ ಬರುವಂತೆ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.


bengaluru

LEAVE A REPLY

Please enter your comment!
Please enter your name here