Home ಬೆಂಗಳೂರು ನಗರ ಒತ್ತಡದ ಬದುಕಿನಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಬಹು ಮುಖ್ಯ — ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಒತ್ತಡದ ಬದುಕಿನಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಬಹು ಮುಖ್ಯ — ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

9
0
Maintaining mental health is very important in stressful life — Health Minister Dinesh Gundurao
Maintaining mental health is very important in stressful life — Health Minister Dinesh Gundurao
Advertisement
bengaluru

ಬೆಂಗಳೂರು:

ಒತ್ತಡದ ಜೀವನ ಶೈಲಿಯಲ್ಲಿ ದೈಹಿಕ ಆರೋಗ್ಯಕ್ಕೆ ನೀಡುವ ಮಹತ್ವವನ್ಮ ಮಾನಸಿಕ ಆರೋಗ್ಯಕ್ಕೂ ನೀಡುವ ಅಗತ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ಕ್ಲಿನಿಕಲ್ ಸೈಕಾಲಜಿ ಸೊಸೈಟಿ ಆಫ್ ಇಂಡಿಯಾ ಹಾಗೂ ನಿಮ್ಹಾನ್ಸ್‌ನ ಕ್ಲಿನಿಕಲ್ ಸೈಕಾಲಜಿ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ಮಾನಸಿಕ ಆರೋಗ್ಯ ಕುರಿತ ತಜ್ಞರ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

ಯೋಗ, ಧ್ಯಾನ, ಮನಸ್ಸಿನಲ್ಲಿ ಸದಾ ಧನಾತ್ಮಕ ಚಿಂತನೆಗಳನ್ನು ಮಾಡುವ ಮುಖೇನ ನಮ್ಮ ಮಾನಸಿಕ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು ಎಂದರು.

bengaluru bengaluru

ಮಾನಸಿಕ ಆರೋಗ್ಯ, ಬದಲಾಗುತ್ತಿರುವ ಜಗತ್ತು ಹೊಸ ಸವಾಲುಗಳು ಮತ್ತು ಅವಕಾಶಗಳ ಕುರಿತಂತೆ ವಿವಿಧ ಶ್ರೇಣಿಯ ಮಾನಸಿಕ ಆರೋಗ್ಯ ತಜ್ಞರು, ವಿದ್ಯಾರ್ಥಿಗಳು, ಕ್ಲಿನಿಕಲ್ ಸೈಕಾಲಜಿಸ್ಟ್‌ಗಳು, ಮನಶ್ಶಾಸ್ತ್ರಜ್ಞರನ್ನ ಒಟ್ಟುಗೂಡಿಸುವುದು ಸಹ ಮುಖ್ಯವಾಗಿದೆ. ಈ ರೀತಿಯ ಸಮ್ಮೇಳನಗಳು ಹೊಸ ವಿಚಾರಗಳು, ಸಂಶೋಧನೆಗಳನ್ನ ಹಂಚಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಾನಸಿಕ ಆರೋಗ್ಯದ ಮಹತ್ವ ಮತ್ತು ಸಮುದಾಯದ ಮಾನಸಿಕ ಆರೋಗ್ಯ ಅಗತ್ಯಗಳನ್ನು ನಿಭಾಯಿಸುವಲ್ಲಿ ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ಪಾತ್ರ ಪ್ರಮುಖವಾದದ್ದು. ಈ ನಿಟ್ಟಿನಲ್ಲಿ ನಿಮ್ಹಾನ್ಸ್ ಸಂಸ್ಥೆ ದೇಶದ ಒಂದು ರತ್ನ ಎಂದರೆ ತಪ್ಪಾಗಲಾರದು. ಅದರಲ್ಲೂ ನಿಮ್ಹಾನ್ಸ್ ಕರ್ನಾಟಕದಲ್ಲಿ ನೆಲೆಗೊಂಡಿರುವುದು ಅದೃಷ್ಟ ಎಂದರು.

ನಿಮ್ಹಾನ್ಸ್ ನ CPSI – Psycho Legal Aid Cell” ಹಾಗೂ ಮಾನಸಿಕ ಆರೋಗ್ಯದ ಕುರಿತಾದ ಎರಡು ಪುಸ್ತಕಗಳನ್ನು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಬಿಡುಗಡೆ ಮಾಡಿದರು.


bengaluru

LEAVE A REPLY

Please enter your comment!
Please enter your name here