Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • Uncategorized
  • Karnataka Revenue Minister Krishna Byre Gowda | ಕೃಷಿ ಜಮೀನಿಗೆ ರಸ್ತೆ ಬಿಡಿ, ಬಗರ್ ಹುಕುಂ ಜಮೀನನ್ನು ಆರು ತಿಂಗಳೊಳಗೆ ಮಂಜೂರು ಮಾಡಿ: ಕೃಷ್ಣ ಬೈರೇಗೌಡ
  • Uncategorized

Karnataka Revenue Minister Krishna Byre Gowda | ಕೃಷಿ ಜಮೀನಿಗೆ ರಸ್ತೆ ಬಿಡಿ, ಬಗರ್ ಹುಕುಂ ಜಮೀನನ್ನು ಆರು ತಿಂಗಳೊಳಗೆ ಮಂಜೂರು ಮಾಡಿ: ಕೃಷ್ಣ ಬೈರೇಗೌಡ

The Bengaluru Live November 7, 2023 5:00 PM 1 minute read
Make way for agricultural land, grant Bagar Hukum land within six months: Karnataka Revenue Minister Krishna Byre Gowda

Make way for agricultural land, grant Bagar Hukum land within six months: Karnataka Revenue Minister Krishna Byre Gowda

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ
  • ಅಣೆಕಟ್ಟೆಗಳ ನೀರಿನ ನಿರ್ವಹಣೆ ಬಗ್ಗೆ ಎಚ್ಚರ ಇರಲಿ
  • ನೀರಿನ‌ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ
  • ಬೆಳೆ ಸಮೀಕ್ಷೆ ಮುಗಿಸಿ, ಫ್ರೂಟ್ಸ್ ನಲ್ಲಿ ನಮೂದಿಸಲು ಕಾಲಮಿತಿ
  • ಕಂದಾಯ ಗ್ರಾಮ ಘೋಷಣೆಗೆ ತಾಕೀತು

ಕೊಪ್ಪಳ:

ಕೃಷಿ ಜಮೀನಿಗೆ ರೈತರು ಓಡಾಡಲು ರಸ್ತೆ ಕಲ್ಪಿಸಿಕೊಡಿ, ಬಾಕಿ ಇರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ರೈತರಿಗೆ ಮುಂದಿನ ಆರು ತಿಂಗಳ ಒಳಗಾಗಿ ಸಾಗುವಳಿ ಚೀಟಿ ನೀಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಾಕೀತು ಮಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ತಮ್ಮದೇ ಕೃಷಿ ಭೂಮಿಗೆ ಓಡಾಡಲು ರೈತರಿಗೆ ರಸ್ತೆ ಇಲ್ಲದೆ ಸಾಕಷ್ಟು ತಿಂದರೆಗೀಡಾಗಿದ್ದರು.‌ ಈ ಸಮಸ್ಯೆಯನ್ನು ನೀಗಿಸುವ ಸಲುವಾಗಿಯೇ ಕಳೆದ‌ ವಾರ ರೈತರ ಕೃಷಿ ಭೂಮಿಗೆ ರಸ್ತೆ ಒದಗಿಸಬೇಕು ಎಂದು ಹೊಸ ಸುತ್ತೋಲೆ ಹೊರಡಿಸಲಾಗಿದೆ.

ಅಧಿಕಾರಿಗಳನ್ನು ಇದನ್ನು ಗಂಭೀರವಾಗಿ ಪರಿಗಣಿಸಬೇಕು, ಪ್ರಸ್ತುತ ಎಲ್ಲಾ ರೈತರ ಕೃಷಿ ಭೂಮಿಗೆ ರಸ್ತೆ ಒದಗಿಸಬೇಕು. ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ಮುನ್ನ ಅಂತಹ ಪ್ರದೇಶಗಳಲ್ಲೂ ಕೃಷಿ ಭೂಮಿಗೆ ರಸ್ತೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ಮುಂದಿನ ಆರು ತಿಂಗಳ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಬಗರ್ ಹುಕುಂ ಭೂಮಿಯನ್ನು ಮಂಜೂರು ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಮುಂದುವರೆದು, “ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ನಿಜಕ್ಕೂ ಉಳುಮೆಯಲ್ಲಿ ತೊಡಗಿರುವ ರೈತರಿಗೆ ಮಾತ್ರ ಸಾಗುವಳಿ ಚೀಟಿ ನೀಡಬೇಕು ಎಂದು ಅವರು ತಾಕೀತು ಮಾಡಿದರು.

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆ್ಯಪ್‌

ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.

ಶೀಘ್ರದಲ್ಲೇ ಈ ಆ್ಯಪ್‌ ಅಧಿಕಾರಿಗಳ ಕೈಸೇರಲಿದೆ. ಈ ಆ್ಯಪ್‌ ಸಹಾಯದೊಂದಿಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು. ಅಲ್ಲದೆ, ಅರ್ಜಿ ವಿಲೇವಾರಿಯಾದ ನಂತರ ಅರ್ಹ ಫಲಾನುಭವಿಗಳಿಗೆ ಇ-ಸಾಗುವಳಿ ಚೀಟಿಯನ್ನೂ ತಂತ್ರಾಂಶದ ಮೂಲಕವೇ ಒದಗಿಸಬಹುದು. ಕಾವೇರಿ 2.0 ಮೂಲಕ ನೋಂದಣಿ ಮಾಡಿಸಿಕೊಟ್ಟರೆ ಜನರಿಗೂ ಅನುಕೂಲವಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಅಣೆಕಟ್ಟೆ ನೀರಿನ ನಿರ್ವಹಣೆ ಬಗ್ಗೆ ಇರಲಿ ಎಚ್ಚರ!

ಅಣೆಕಟ್ಟೆಗಳಲ್ಲಿ ನೀರಿನ ಸ್ವೇಚ್ಚಾಚಾರದ ನಿರ್ವಹಣೆಯಿಂದ ಇಂದು ಕುಡಿಯುವ ನೀರಿಗೂ ಸಮಸ್ಯೆ ಎದುರಿಸುವಂತಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

“ಕಳೆದ ವರ್ಷ ರಾಜ್ಯದಲ್ಲಿ ಅತ್ಯುತ್ತಮ ಮಳೆ ಆಗಿತ್ತು. ಆದರೆ, ನೀರನ್ನು ಬೇಕಾಬಿಟ್ಟಿಯಾಗಿ ಬಳಸಿದ ಕಾರಣ ಜೂನ್ ತಿಂಗಳಿಗೇ ಸಮಸ್ಯೆ ಉಂಟಾಗಿತ್ತು. ಇದು ನಿಜಕ್ಕೂ ಸ್ವೇಚ್ಚಾಚಾರದ ನಡವಳಿಕೆ” ಎಂದು ಕಿಡಿಕಾರಿದರು.

ಈ ವರ್ಷ ಉತ್ತಮ ಮಳೆಯಾಗಿಲ್ಲ. ಈ ವರ್ಷವೂ ಸಹ ಅಧಿಕಾರಿಗಳು ಅಂತಹದ್ದೇ ನಡವಳಿಕೆ ಮುಂದುವರೆಸಿದರೆ, ಏಪ್ರಿಲ್-ಮೇ ತಿಂಗಳಿಗೆ ಅಣೆಕಟ್ಟೆಗಳಲ್ಲಿ ನೀರಿನ ಸಂಗ್ರಹ ಇಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಲಿದೆ.‌ ಇದರಿಂದ ಅಕ್ಕಪಕ್ಕದ ಜಿಲ್ಲೆಗಳಿಗೂ ಸಮಸ್ಯೆ ಉಂಟಾಗಲಿದೆ. ಹೀಗಾಗಿ ಕೃಷಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ

ಕೊಪ್ಪಳ ಭಾಗದಲ್ಲಿ ಎಲ್ಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದರೂ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಈ ವರ್ಷ ಬರಗಾಲ ಎದುರಾಗಿದೆ. ಮುಂದಿನ ಬೇಸಿಗೆ ಅಥವಾ ಅದಕ್ಕೂ ಮುನ್ನವೇ ಹಾವೇರಿ ಭಾಗದ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ.‌ಕೊಪ್ಪಳದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಎಂದು ಸರ್ವೆ ನಡೆಸಿ ನೀರಿನ ಸಮಸ್ಯೆ ಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಿ. ಯಾವ ಭಾಗದಲ್ಲೂ ಸಾರ್ವಜನಿಕರು ನೀರಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಿ ಎ‌ಂದರು.

ಕುಡಿಯುವ ನೀರಿಗಾಗಿ ಈಗಾಗಲೇ ಸರ್ಕಾರ ಹಣ ಬಿಡುಗಡೆಮಾಡಿದೆ.‌ ಜಿಲ್ಲಾಧಿಕಾರಿ ಖಾತೆಯಲ್ಲಿ 19.5 ಕೋಟಿ ಹಣ ಇದೆ. ಈ ಹಣವನ್ನು ಬಳಸಿಕೊಳ್ಳಬಹುದು. ಮುಂಜಾಗ್ರತಾ ಕ್ರಮವಾಗಿ ಇಲಾಖೆ ವತಿಯಿಂದಲೇ ಬೋರ್ ಕೊರೆಸಲು ಸಹ ಪಿಡಿಎಂ ಗಳು ಪಾಯಿಂಟ್ ಗುರುತಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

ಬೆಳೆ ಸಮೀಕ್ಷೆ ಮುಗಿಸಿ, ರೈತರಿಗೆ ಪರಿಹಾರ ತಲುಪಿಸಿ

ಬೆಳೆ ಪರಿಹಾರ ಆನ್‌ಲೈನ್ ಮೂಲಕವೇ ರೈತರಿಗೆ ತಲುಪಲಿದ್ದು, ಅವರ ಮಾಹಿತಿ ಬಿಟ್ಟುಹೋದರೆ ಮ್ಯಾನ್ಯುವಲ್ ಆಗಿ ಅವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ. ಹೀಗಾಗಿ ಶೇ.100 ರಷ್ಟು ಎಲ್ಲಾ ರೈತರ ಬೆಳೆ ಸಮೀಕ್ಷೆ ನಡೆಸಿ ಅವರಿಗೆ ನ್ಯಾಯಯುತ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಈ ವರ್ಷ ಇತಿಹಾಸ ಕಾಣದ ಬರಕ್ಕೆ ತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ. ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ ಇಂತಹ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ. ಆದರೆ, ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಬೆಳೆ ಸಮೀಕ್ಷೆ ಅಗತ್ಯ.

ಅಧಿಕಾರಿಗಳು ಕೊಪ್ಪಳದಲ್ಲಿ ಈಗಾಗಲೇ ಶೇ.98 ರಷ್ಟು ಬೆಳೆ ಸಮೀಕ್ಷೆ ನಡೆಸಿದ್ದೀರಿ. ಆದರೆ, ರೈತರ ಎಲ್ಲಾ ಮಾಹಿತಿಯನ್ನೂ ‘ಫ್ರೂಟ್ಸ್’ ತಂತ್ರಾಂಶದಲ್ಲಿ ನಮೂದಿಸಿ ಈ ವಾರದೊಳಗೆ ಈ ಎಲ್ಲಾ ಕೆಲಸಗಳನ್ನು ಮುಗಿಸಿ ಎಂದು ಗಡುವು ನೀಡಿದರು.

ಕಂದಾಯ ಗ್ರಾಮ ಘೋಷಿಸಿ, ಬಡವರಿಗೆ ನ್ಯಾಯ ಸಲ್ಲಿಸಿ:

ಕಂದಾಯ ಗ್ರಾಮಗಳನ್ನು ಶೀಘ್ರ ಘೋಷಿಸಿ ಬಡವರಿಗೆ ನೆಮ್ಮದಿಯ ಬದುಕು ಮಾಡಲು ಬಿಡಿ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದ ಸಚಿವರು, “ಕಂದಾಯ ಇಲಾಖೆಗೆ ಸೇರದ ಕಾರಣ ಕಂದಾಯೇತರ ಜನವಸತಿ ನಿವಾಸಿಗಳು ಅಭಿವೃದ್ಧಿ ಯೋಜನೆಗಳಿಂದ ವಂಚಿತರಾಗುತ್ತಿದ್ದರು ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತಂದು ತಾಂಡ-ಗೊಲ್ಲರಹಟ್ಟಿ ಸೇರಿದಂತೆ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲು ಅನುವುಮಾಡಿಕೊಡಲಾಗಿತ್ತು.

ಸಾರ್ವಜನಿಕರ 30 ವರ್ಷಗಳ ಬೇಡಿಕೆಗೆ ಅನುಗುಣವಾಗಿ 2013ರ ಕಾಂಗ್ರೆಸ್ ಸರ್ಕಾರ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ನಿರ್ಧಾರ ತೆಗದುಕೊಂಡಿದ್ದರು. ಆದರೆ, ಕೊಪ್ಪಳದಲ್ಲಿ ಈ ಸಂಬಂಧ ಗಮನಾರ್ಹ ಕೆಲಸ ಆಗದಿರುವುದು ವಿಷಾಧನೀಯ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು.

ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 36 ಕಂದಾಯ ಗ್ರಾಮಗಳು ರಚನೆಯಾಗಬೇಕಿತ್ತು. ಆದರೆ, ಈವರೆಗೆ 27 ಗ್ರಾಮಗಳಿಗೆ ಮಾತ್ರ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಉಳಿದ ಗ್ರಾಮಗಳನ್ನು ಕಂದಾಯ ಗ್ರಾಮಗಳು ಎಂದು ಘೋಷಿಸಿ ಹಕ್ಕುಪತ್ರ ನೀಡುವುದು ಯಾವಾಗ? ಎಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇ ಆಫೀಸ್ ಶೇ.100 ರಷ್ಟು ಬಳಕೆಗೆ ತಾಕೀತು!

ಸಭೆಯ ವೇಳೆ ಇ-ಆಫೀಸ್ ಬಳಕೆಯ ಬಗ್ಗೆಯೂ ಚರ್ಚೆ ನಡೆಸಿದ ಸಚಿವರು, ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ತಾಲೂಕುಗಳಲ್ಲೂ ಇ-ಆಫೀಸ್ ಅನುಷ್ಠಾನಗೊಂಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ, ಎಲ್ಲಾ ಕಡತಗಳೂ ಇ-ಆಫೀಸ್ ಮೂಲಕ ವಿಲೇವಾರಿಯಾಗುತ್ತಿಲ್ಲ ಎಂದು ಬೇಸರ ಹೊರಹಾಕಿದರು.

ಇ-ಆಫೀಸ್ ಮೂಲಕ ಕಡತ ವಿಲೇವಾರಿಗೆ ಮುಂದಾದರೆ, ಎಲ್ಲಾ ಕೆಲಸಗಳೂ ವೇಗ ಪಡೆಯುತ್ತದೆ. ಅಧಿಕಾರಿಗಳ-ಜನರ ಸಮಯವೂ ಉಳಿಯುತ್ತದೆ. ಹೀಗಾಗಿ ಶೀಘ್ರದಲ್ಲಿ ಕೊಪ್ಪಳದಲ್ಲಿ ಇ-ಆಫೀಸ್ ಅನ್ನು ಶೇ.100 ರಷ್ಟು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: D B Chandre Gowda Passes Away | ಡಿ ಬಿ ಚಂದ್ರೇಗೌಡ ನಿಧನ
Next: Belagavi Suvarna Soudha | ಬೆಳಗಾವಿ ಸುವರ್ಣಸೌಧ ನಿರ್ವಹಣೆಗೆ ಶಾಶ್ವತ ಯೋಜನೆಗೆ ಚಿಂತನೆ

Related Stories

ಹಸಿರು ಕಡತ ಹಿಡಿದ ವ್ಯಕ್ತಿಯ ಬಳಿ ರಸ್ತೆಯ ಮೇಲೆ ಸುಡುತ್ತಿರುವ ಕಾಗದಗಳ ರಾಶಿ ಮತ್ತು ಸುತ್ತ ನಿಂತಿರುವ ಜನರು
  • Uncategorized

ಬಸವಮಂಟಪ ಕೃತಿ: ಸಂಪುಟದಲ್ಲಿ ಚರ್ಚಿಸಿ ಲೇಖಕ ರವಿ ಹಂಜ್ ವಿರುದ್ಧ ಎಫ್‌ಐಆರ್ ದಾಖಲು, ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಸಿಎಂ ಶಿವಕುಮಾರ್

The Bengaluru Live November 20, 2026 3:36 PM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರು ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಕುಳಿತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • Uncategorized

ಸರ್ಕಾರಿ ಆದೇಶದಂತೆ ಇದೇ ಮೊದಲ ಬಾರಿಗೆ ಎರಡು ವರ್ಷಗಳ ಬಿ.ಎಡ್ ಪ್ರವೇಶಕ್ಕೆ ಕೆಇಎ ಕೌನ್ಸೆಲಿಂಗ್, ನವೆಂಬರ್ 30ರವರೆಗೆ ಆನ್‌ಲೈನ್ ಅರ್ಜಿ

The Bengaluru Live November 20, 2026 3:05 PM
ವಿಕಾಸಸೌಧದ ಸಭಾಂಗಣದಲ್ಲಿ ಪರಿಶೀಲನಾ ಸಭೆಯ ವೇಳೆ ಉದ್ದನೆಯ ಮರದ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು
  • Uncategorized

ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳೊಂದಿಗೆ ಕಂದಾಯ, ಯುವಜನಸೇವೆ ಮತ್ತು ಕ್ರೀಡಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಡಿಸಿಎಂ ಪರಮೇಶ್ವರ

The Bengaluru Live November 20, 2026 1:33 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.