Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಆರೋಗ್ಯ
  • ಮಲ್ಲೇಶ್ವರಂ: ಕೊರೋನಾ ಪರೀಕ್ಷೆಗೆ ವಿನೂತನ ಡ್ರೈವ್ ಥ್ರೂ/ವಾಕ್ ಇನ್ ವ್ಯವಸ್ಥೆ
  • ಆರೋಗ್ಯ
  • ಬೆಂಗಳೂರು ನಗರ

ಮಲ್ಲೇಶ್ವರಂ: ಕೊರೋನಾ ಪರೀಕ್ಷೆಗೆ ವಿನೂತನ ಡ್ರೈವ್ ಥ್ರೂ/ವಾಕ್ ಇನ್ ವ್ಯವಸ್ಥೆ

The Bengaluru Live January 19, 2022 3:00 PM 1 minute read
Malleswaram An innovative drive thru walk-in system for Corona testing

ಮಲ್ಲೇಶ್ವರಂ: ಕೊರೋನಾ ಪರೀಕ್ಷೆಗೆ ವಿನೂತನ ಡ್ರೈವ್ ಥ್ರೂ/ವಾಕ್ ಇನ್ ವ್ಯವಸ್ಥೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಮನೆ ಬಾಗಿಲಿನಲ್ಲೇ ಕೋವಿಡ್ ತಪಾಸಣೆ ನಡೆಸುವ ವಾಹನಗಳಿಗೆ ಚಾಲನೆ

ಬೆಂಗಳೂರು:

ತಾವು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ತಾಪ್ತಿಯಲ್ಲಿ ಮನೆಮನೆಗೂ ಹೋಗಿ, ತ್ವರಿತ ಗತಿಯಲ್ಲಿ ಕೋವಿಡ್/ಓಮೈಕ್ರಾನ್ ಸೋಂಕು ಪರೀಕ್ಷೆ ಮಾಡಲಿರುವ ಮತ್ತು ಸಾರ್ವಜನಿಕರು ತಾವಾಗಿಯೇ ವಾಹನಗಳಲ್ಲಿ ಬಂದು ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತಹ ವಿನೂತನ ಡ್ರೈವ್ ಥ್ರೂ/ವಾಕ್ ಇನ್ ವ್ಯವಸ್ಥೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಚಾಲನೆ ನೀಡಿದರು.

ಇದರ ಅಂಗವಾಗಿ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯ 18ನೇ ಅಡ್ಡರಸ್ತೆಯಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಕೊರೋನಾ ಮತ್ತು ಓಮೈಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಹೀಗಾಗಿ ಇಂತಹ ಸರಳ, ಸುಲಭ ಮತ್ತು ಸುರಕ್ಷಿತ ತಪಾಸಣಾ ವ್ಯವಸ್ಥೆ ಬೇಕಾಗಿತ್ತು. ಈ ಪರೀಕ್ಷೆಗಳು ಸಂಪೂರ್ಣ ಉಚಿತವಾಗಿವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಅದನ್ನು ಕೂಡ ಒದಗಿಸಲಾಗುವುದು’ ಎಂದರು.

Malleswaram An innovative drive thru walk-in system for Corona testing

`ಸಾರ್ವಜನಿಕರು ದ್ವಿಚಕ್ರ ವಾಹನ, ಆಟೋರಿಕ್ಷಾ, ಕಾರು ಇತ್ಯಾದಿಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಲು ಬಂದರೆ ವೈದ್ಯಕೀಯ ಸಿಬ್ಬಂದಿ ತಾವೇ ಖುದ್ದಾಗಿ ಗಂಟಲು ದ್ರವವನ್ನು ಸಂಗ್ರಹಿಸಿಕೊಳ್ಳಲಿದ್ದಾರೆ. ಪರೀಕ್ಷೆಯ ಫಲಿತಾಂಶವನ್ನು ಆಯಾ ವ್ಯಕ್ತಿಗಳ ಮೊಬೈಲ್ ಫೋನಿಗೆ ರವಾನಿಸಲಾಗುವುದು. ಈ ಡ್ರೈವ್-ಇನ್/ವಾಕ್ ಥ್ರೂ ಕೇಂದ್ರವು ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೂ ಕಾರ್ಯ ನಿರ್ವಹಿಸಲಿದ್ದು, ಇದರಲ್ಲಿ ಗಂಟಲು ದ್ರವ ಸಂಗ್ರಾಹಕರು, ಲ್ಯಾಬ್ ಟೆಕ್ನೀಷಿಯನ್ ಮತ್ತು ಡೇಟಾ ಎಂಟ್ರಿ ಆಪರೇಟರುಗಳು ಇರುತ್ತಾರೆ. ಈ ವ್ಯವಸ್ಥೆಯನ್ನು ಮಲ್ಲೇಶ್ವರಂ ಕ್ಷೇತ್ರದ ಉಳಿದ ಭಾಗಗಳಿಗೂ ವಿಸ್ತರಿಸಲಾಗುವುದು. ಇಲ್ಲಿ ಯಾರು ಬೇಕಾದರೂ ಪರೀಕ್ಷೆ ಮಾಡಿಸಿಕೊಳ್ಳಬಹುದು,’ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವರು, ಕ್ಷೇತ್ರದ 7 ವಾರ್ಡುಗಳ ವ್ಯಾಪ್ತಿಯಲ್ಲೂ ಪ್ರತಿಯೊಂದು ಮನೆಗೂ ಹೋಗಿ ಕೋವಿಡ್/ಓಮೈಕ್ರಾನ್ ಸೋಂಕು ಪರೀಕ್ಷೆ ಮಾಡಲಿರುವ ಸಂಚಾರಿ ತಪಾಸಣಾ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು.

ಈ ವಾಹನಗಳಲ್ಲಿ ಕೂಡ ನುರಿತ ವೈದ್ಯಕೀಯ ಸಿಬ್ಬಂದಿಗಳ ತಂಡ ಇರಲಿದ್ದು, ಸ್ಥಳದಲ್ಲೇ ಆರ್.ಎ.ಟಿ. ಪರೀಕ್ಷೆ ನಡೆಸಲಿದೆ. ಜತೆಗೆ, ಆರ್.ಟಿಪಿಸಿಆರ್ ಪರೀಕ್ಷೆ ಅಗತ್ಯವೆನಿಸಿದರೆ ಗಂಟಲುದ್ರವವನ್ನು ಸಂಗ್ರಹಿಸಿಕೊಳ್ಳಲಿದ್ದು, ಫಲಿತಾಂಶವನ್ನು ಸಂಬಂಧಿಸಿದ ವ್ಯಕ್ತಿಗಳ ಮೊಬೈಲಿಗೆ ಕಳಿಸಿ ಕೊಡಲಾಗುವುದು. ಜತೆಗೆ, ಕೋವಿಡ್ ಸೋಂಕಿಗೆ ಸಂಬಂಧಪಟ್ಟಂತೆ ಜಾಗೃತಿ, ಪರೀಕ್ಷೆ, ಟ್ರಯೇಜ್, ಸಿಸಿಸಿ, ಸಹಾಯವಾಣಿ, ವಾರ್ ರೂಮ್ ಕುರಿತು ಅಗತ್ಯ ಮಾಹಿತಿಗಳನ್ನು ಧ್ವನಿವರ್ಧಕದ ಮೂಲಕ ಬಿತ್ತರಿಸಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಕೋವಿಡ್‌ ಸೋಂಕು ಲಕ್ಷಣ ಇರುವವರಿಗೆ ಸರಳ, ಸುಲಭ, ಸುರಕ್ಷಿತ ಪರೀಕ್ಷೆ ನಡೆಸಲು ನಮ್ಮ ಮಲ್ಲೇಶ್ವರದಲ್ಲಿ Drive-Through/Walk-in Covid Testing Centre, ಮನೆ ಬಾಗಿಲಿಗೆ ತೆರಳಿ ಪರೀಕ್ಷೆ ಮಾಡುವ ಉಪಕ್ರಮಕ್ಕೆ ಚಾಲನೆ ನೀಡಿದೆವು.

ಕೋವಿಡ್‌ ಮುಕ್ತ ಮಲ್ಲೇಶ್ವರಕ್ಕಾಗಿ BBMP, ವೈದ್ಯಕೀಯ ಸಿಬ್ಬಂದಿಗಳು ಒಂದು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. pic.twitter.com/xV3UofDCIV

— Dr. Ashwathnarayan C. N. (@drashwathcn) January 19, 2022

ಇದರ ಜತೆಗೆ, ಸೋಂಕಿತರ ಜತೆ ಪ್ರಾಥಮಿಕ ಮತ್ತು ದ್ವಿತೀಯ ಸ್ತರದ ಸಂಪರ್ಕ ಹೊಂದಿದ್ದವರ ತಪಾಸಣೆಯನ್ನೂ ಉಚಿತವಾಗಿ ನಡೆಸಲಾಗುವುದು. ಆದರೆ, ಇದಕ್ಕಾಗಿ ಯಾರನ್ನೂ ಒತ್ತಾಯ ಪಡಿಸುವುದಿಲ್ಲ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತ ಡಾ.ದೀಪಕ್, ಕೋವಿಡ್ ಉಸ್ತುವಾರಿ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಮತ್ತು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳಾದ ಡಾ.ಮನೋರಂಜನ್ ಹೆಗಡೆ, ಡಾ.ಸುಚೇತಾ, ಡಾ.ಪ್ರಕಾಶ್ ಉಪಸ್ಥಿತರಿದ್ದರು.

ಮಲ್ಲೇಶ್ವರಂನಲ್ಲಿ ಲಭ್ಯವಿರುವ ಸೌಲಭ್ಯಗಳು

ಕೊರೋನಾ/ಓಮೈಕ್ರಾನ್ ಸೋಂಕಿನಿಂದ ಎದುರಾಗಲಿರುವ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮಲ್ಲೇಶ್ವರಂ ಕ್ಷೇತ್ರದಲ್ಲಿ ಈಗಾಗಲೇ ಸಕಲ ವ್ಯವಸ್ಥೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಇದರಂತೆ, ಪ್ಯಾಲೇಸ್ ಗುಟ್ಟಹಳ್ಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 24/7 ಪರೀಕ್ಷಾ ಕೇಂದ್ರ, ಕೋವಿಡ್ ಆರೈಕೆ ಕೇಂದ್ರ, 3 ಸಾವಿರ ಪಲ್ಸ್ ಆಕ್ಸಿಮೀಟರ್ ಸಂಗ್ರಹ, ಕ್ಷೇತ್ರದಲ್ಲಿ 100 ಆಕ್ಸಿಜನ್ ಕಾನ್ಸಂಟ್ರೇಟರುಗಳು, ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಹಿತ 100 ಹಾಸಿಗೆಗಳ ಐಸಿಯು ಘಟಕ, 100 ಸಾಮಾನ್ಯ ಹಾಸಿಗೆಗಳ ಐಸಿಯು ಘಟಕ, ಕ್ಷೇತ್ರದ 7 ವಾರ್ಡುಗಳಲ್ಲೂ ಒಂದೊಂದು ಟ್ರೈಯೇಜ್ ಟೀಮ್, ಕ್ಷೇತ್ರದ ವ್ಯಾಪ್ತಿಯಲ್ಲಿ ವಾರ್ ರೂಮ್, 7 ಸಂಚಾರಿ ಕೋವಿಡ್ ತಪಾಸಣಾ ತಂಡಗಳು ಇವೆ ಎಂದು ಅವರು ವಿವರಿಸಿದರು.

ಸೋಂಕು ಕಂಡುಬಂದವರು ಕ್ಷೇತ್ರದ ವ್ಯಾಪ್ತಿಗೆ ಬರುವ ಗಾಯತ್ರೀನಗರ, ಸುಬ್ರಹ್ಮಣ್ಯನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮತ್ತೀಕೆರೆಯ ನೇತಾಜಿ ಸರ್ಕಲ್, ಮಲ್ಲೇಶ್ವರಂನಲ್ಲಿರುವ ಗಾಂಧಿ ಗ್ರಾಮ, ಸುಬೇದಾರ್ ಪಾಳ್ಯ ಮತ್ತು ವೈಯಾಲಿಕಾವಲ್ ನ ದೋಬಿ ಘಾಟ್ ಬಳಿ ಇರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಪರೀಕ್ಷೆ ಮಾಡಿಸಿಕೊಳ್ಳಬಹುದು ಎಂದು ಅವರು ನುಡಿದರು.

About the Author

The Bengaluru Live

Administrator

Visit Website View All Posts

Post navigation

Previous: ಇನಾಂ ಜಮೀನುದಾರರಿಗೆ ಶುಭ ಸುದ್ದಿ: ಸಚಿವ ಆರ್.ಅಶೋಕ್
Next: ರಾಮನಗರ ಸರಕಾರಿ ಎಂಜಿನಿಯರಿಂಗ್ ಕಾಲೇಜು: ಜೂನ್ ಹೊತ್ತಿಗೆ ಕಾಮಗಾರಿ ಮುಗಿಸಲು ಸೂಚನೆ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

November 12, 2026 9:55 PM
ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

November 12, 2026 9:36 PM
ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM

ನೀವು ತಪ್ಪಿಸಿಕೊಂಡಿರಬಹುದು

ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

The Bengaluru Live November 12, 2026 9:55 PM
ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

The Bengaluru Live November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

The Bengaluru Live November 12, 2026 9:36 PM
parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ
  • ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
  • ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
©Copyright 2025 The Bengaluru Live All rights reserved. | MoreNews by AF themes.