Home ಬೆಂಗಳೂರು ನಗರ Bengaluru: ಬಾಲಕಿ ಎದುರೇ ಹಸ್ತಮೈಥುನ ಮಾಡಿಕೊಂಡಿದ್ದ ವ್ಯಕ್ತಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ!

Bengaluru: ಬಾಲಕಿ ಎದುರೇ ಹಸ್ತಮೈಥುನ ಮಾಡಿಕೊಂಡಿದ್ದ ವ್ಯಕ್ತಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ!

8
0
Man sentenced to 3 years imprisonment for masturbating in front of girl
Man sentenced to 3 years imprisonment for masturbating in front of girl
Advertisement
bengaluru

ಬೆಂಗಳೂರು:

ಬಾಲಕಿ ಎದುರೇ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡಿದ್ದಕ್ಕಾಗಿ 33 ವರ್ಷದ ವ್ಯಕ್ತಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.

2020ರಲ್ಲಿ ಆರೋಪಿ ಬಾಲಕಿ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದ. ಈ ಸಂಬಂಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರಾದ ರೂಪಾ ಕೆಎನ್, ಎಚ್ ರಹಮತ್ ಉಲ್ಲಾ ಬೇಗ್‌ ಅನ್ನು ಲೈಂಗಿಕ ಕಿರುಕುಳದ ಅಪರಾಧಿ ಎಂದು ಘೋಷಿಸಿದರು ಮತ್ತು ಆತನಿಗೆ 20,000 ರೂ. ದಂಡ ವಿಧಿಸಿದ್ದಾರೆ.

bengaluru bengaluru

13 ವರ್ಷದ ಬಾಲಕಿ ಬೆಂಗಳೂರಿನಲ್ಲಿ 2020ರ ಫೆಬ್ರುವರಿಯಲ್ಲಿ ತನ್ನ ಸಾಕುನಾಯಿಯನ್ನು ಕರೆದುಕೊಂಡು ವಾಕಿಂಗ್ ಮಾಡುತ್ತಿದ್ದ ವೇಳೆ, ಬಾಲಕಿ ಎದುರೇ ರಹಮತ್ ಉಲ್ಲಾ ಹಸ್ತಮೈಥುನ ಮಾಡಿಕೊಂಡಿದ್ದ.

ಇದರಿಂದ ಹೆದರಿದ ಬಾಲಕಿ ಮನೆಗೆ ಹಿಂತಿರುಗಲು ಮುಂದಾದಾಗ, ಆಕೆಯನ್ನು ಆತ ಹಿಂಬಾಲಿಸಿದ್ದ ಮತ್ತು ಅಸಭ್ಯವಾಗಿ ವರ್ತಿಸಿದ್ದ.
ಬಾಲಕಿ ತಂದೆ ಅದೇ ದಿನ ಪೊಲೀಸರಿಗೆ ದೂರು ದಾಖಲಿಸಿದರು. ಆರೋಪಿ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅದಾದ ಕೆಲವು ದಿನಗಳ ನಂತರ ಫೆಬ್ರುವರಿ 13 ರಂದು ಆರೋಪಿಯನ್ನು ಬಂಧಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಯನ್ನು ಗುರುತಿಸಲಾಗಿದ್ದು, ವಿಚಾರಣೆಯಲ್ಲಿ ಆತನ ವಿರುದ್ಧ ಸಾಕ್ಷ್ಯವಾಗಿ ಬಳಸಲಾಗಿದೆ.


bengaluru

LEAVE A REPLY

Please enter your comment!
Please enter your name here