Home ಬೆಂಗಳೂರು ನಗರ ಮಂಡ್ಯ: ಕೆಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಕೈ ಕಟ್, ಚಾಲಕನ ತಪ್ಪಿಲ್ಲ ಎಂದ...

ಮಂಡ್ಯ: ಕೆಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಕೈ ಕಟ್, ಚಾಲಕನ ತಪ್ಪಿಲ್ಲ ಎಂದ KSRTC

258
0
Mandya: Woman's hand cut in Karnataka Transport bus accident, KSRTC says driver is not at fault
Mandya: Woman's hand cut in Karnataka Transport bus accident, KSRTC says driver is not at fault

ಬೆಂಗಳೂರು:

ಕೆಎಸ್ ಆರ್ ಟಿಸಿ ಬಸ್ ದ ಹಿಂಬದಿಯ ಕಿಟಕಿಯ ಬಳಿ ಆಸನಗಳಲ್ಲಿ ಕುಳಿತಿದ್ದ ಮಹಿಳೆಯೊಬ್ಬರ ಕೈ ಕಟ್ ಆಗಿದ್ದು ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರಿ ಸಾರಿಗೆ ನಿಗಮ KSRTC ಚಾಲಕನ ತಪ್ಪಿಲ್ಲ ಎಂದು ಹೇಳಿದೆ

ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಬಸ್‌ನಲ್ಲಿ ಕಿಟಕಿ ಮೂಲಕ ಹತ್ತುತ್ತಿದ್ದ ಮಹಿಳೆಗೆ ಗಾಯವಾಗಿದೆ ಎಂಬುದು ಸುಳ್ಳು ಸುದ್ದಿ ಎಂದಿರುವ KSRTC ಇದು ಅಪಘಾತದಿಂದಾದ ಘಟನೆ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ನಿಗಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು, ದಿನಾಂಕ 18/06/2023 ರಂದು ಕ.ರಾ.ರ.ಸಾ.ನಿಗಮ, ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ವಾಹನ ಸಂಖ್ಯೆ KA-10-F-151 ಅನುಸೂಚಿ ಸಂಖ್ಯೆ 34 ರಲ್ಲಿ ನಂಜನಗೂಡಿನಿಂದ ಟಿ.ನರಸೀಪುರ ಕ ಕಾರ್ಯಚರಣೆ ಮಾಡುತ್ತಿರುವಾಗ, ಮಧ್ಯಾಹ್ನ ಸಮಯ ಸುಮಾರು 1.45 ರಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಸಂಖ್ಯೆ TN-77-Q-8735 ಯ ಚಾಲಕನು ಸಂಸ್ಥೆಯ ವಾಹನದ ಬಲ ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಮಾಡಿ ಅಪಘಾತವಾಗಿರುತ್ತದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿರುತ್ತದೆ. ಶ್ರೀಮತಿ ಶಾಂತ ಕುಮಾರಿ, W/O ಲೇ. ಬಸವರಾಜು, 33 ವರ್ಷ, ಮಾಗುಡಿಲು, ಹೆಚ್.ಡಿ.ಕೋಟೆ ತಾಲೂಕು ಇವರಿಗೆ ಬಲಗೈ ತುಂಡಾಗಿದೆ ಹಾಗೂ ಶ್ರೀಮತಿ ರಾಜಮ್ಮ, W/O ನಾಗರಾಜ ನಾಯಕ, 50 ವರ್ಷ, ಹುಲ್ಲಹಳ್ಳಿ, ನಂಜನಗೂಡು ತಾಲೂಕು ಇವರಿಗೆ ಬಲಗೈ, ತೀವ್ರ ಪೆಟ್ಟಾಗಿರುತ್ತದೆ. ಸಂಸ್ಥೆಯ ಅಧಿಕಾರಿಗಳು ಸ್ಥಳಪರಿಶೀಲನ ನಡಿಸಿದ್ದು, ಗಾಯಾಳುಗಳನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿರುತ್ತದೆ.

sun14

ಲಾರಿ ಚಾಲಕನ ವಿರುದ್ಧ ಬಿಳಿಗರ ಪೋಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿರುತ್ತದೆ. ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಿಗಮವು ಭರಿಸುತ್ತಿದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಕಿಯ ಮೂಲಕ ಬಸ್ಸನ್ನು ಹತ್ತುವಾಗ ನಡೆದಿರುವ ಘಟನೆ ಇದಾಗಿರುವುದಿಲ್ಲ ಎಂಬುದನ್ನು ತಮ್ಮಗಳ ಆದ ಗಮನಕ್ಕೆ ತರಲಾಗಿದೆ ಎಂದು KSRTC ಸ್ಪಷ್ಟನೆ ನೀಡಿದೆ.

LEAVE A REPLY

Please enter your comment!
Please enter your name here