ಮಂಡ್ಯ/ಬೆಂಗಳೂರು:
ಮಂಡ್ಯ ಜಿಲ್ಲೆಯ ರಾಮಕೃಷ್ಣ (25) ಎಂಬ ಯುವಕ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಟ ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
ಘಟನೆ ತಾಲೂಕಿನ ಕೋಡಿ ದೊಡ್ಡಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡ್ತಿದ್ದ ಕೃಷ್ಣ, ಮೊನ್ನೆ ಕೆಲಸ ಮುಗಿಸಿಕೊಂಡು ಬಂದಿದ್ದ. ಬಳಿಕ ನಿನ್ನೆ ರಜೆ ಹಾಕಿ ಮನೆಯಲ್ಲೇ ಇದ್ದ. ಮನೆಯವರು ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇದಕ್ಕೂ ಮುನ್ನ ಆತ ಡೆತ್ನೋಟ್ ಬರೆದಿದ್ದು, ನನ್ನ ಅಂತ್ಯಕ್ರಿಯೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಬೇಕು.
“ನಾನು ನಿಮ್ಮ ಅಪ್ಪಟ ಅಭಿಮಾನಿ. ಕೈಮುಗಿದು ಕೇಳಿಕೊಳ್ಳುತ್ತೇನೆ. ನೀವು ನನ್ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನನ್ನ ಕೊನೆಯ ಆಸೆ ಈಡೇರಿಸಿ,” ಎಂದು ಹೇಳಿದ್ದಾನೆ. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಿದ್ದರಾಮಯ್ಯ ಭೇಟಿ
15 ವರ್ಷದ ಹಿಂದೆ ಕೃಷ್ಣನ ತಂದೆ ಚಂದ್ರು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಅಭಿಮಾನಿಯ ಕೋರಿಕೆ ಈಡೇರಿಸಲು ಸಿದ್ದರಾಮಯ್ಯ ಇಂದು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.