ಬೆಳಗಾವಿ:
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು .
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್ . ಈಶ್ವರಪ್ಪ , ಕೇಂದ್ರ ಸಚಿವ ಪ್ರಲ್ಲಾದ ಜೋಶಿ , ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ , ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಅನಿಲ ಬೆನಕೆ ಜೊತೆಗಿದ್ದರು.
ಇಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ನಿಮಿತ್ತವಾಗಿ ನಗರದ ಗಣೇಶ ದೇವಸ್ಥಾನ, ಸಮಾದೇವಿ ದೇಗುಲ, ಶನಿ ದೇವರ ಗುಡಿ ಹಾಗೂ ಸಾಯಿಬಾಬ ಮಂದಿರಕ್ಕೆ ಭೇಟಿ ನೀಡಿ, ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ಗೋಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆಯಲಾಯಿತು.
— Mangal Suresh Angadi (@MangalAngadi) March 30, 2021
1/ pic.twitter.com/sBZSeKiq18