Home ಅಪರಾಧ Mangalore: Four missing high school students found dead | ನಾಪತ್ತೆ ಆಗಿದ್ದ ಪ್ರೌಢಶಾಲೆಯ...

Mangalore: Four missing high school students found dead | ನಾಪತ್ತೆ ಆಗಿದ್ದ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

15
0
Mangalore: Seven arrested in connection with two college students' abduction and assault case

ಮಂಗಳೂರು: ನಾಪತ್ತೆ ಆಗಿದ್ದ SSLC ಓದುತ್ತಿದ್ದ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಜರುಗಿದೆ.

ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಪರೀಕ್ಷೆ ಬರೆದು ಈಜಲು ತೆರಳಿದ್ದ ನಾಲ್ವರು ನದಿಯಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಹಾಗೂ ರಾಘವೇಂದ್ರ ಮೃತ ದುರ್ದೈವಿಗಳು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್​ ಪಟ್ಟಣದ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ SSLC ಓದುತ್ತಿದ್ದ ವಿದ್ಯಾರ್ಥಿಗಳು ನಿನ್ನೆ SSLC ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಎಷ್ಟು ಸಮಯವಾದರೂ ಮಕ್ಕಳು ಮನೆಗೆ ಬರದ ಹಿನ್ನೆಲೆ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು

LEAVE A REPLY

Please enter your comment!
Please enter your name here