
Mangalore: IPS officer Anupam Agarwal has been appointed as the new police commissioner of Mangalore city
ಮಂಗಳೂರು:
ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.
2008-ಬ್ಯಾಚ್ IPS ಅಧಿಕಾರಿ ಅನುಪಮ್ ಅಗರ್ವಾಲ್ ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸಿದರೇ ವರ್ಗಾವಣೆ ಮಾಡಿದೆ.