ಮಂಗಳೂರು:
ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಇತರಿಗೆ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಕೇರಳದ 25 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬೆನೆಡಿಕ್ಟ್ ಸಾಬು ಎಂದು ಗುರುತಿಸಲಾಗಿದ್ದು, ಕೇರಳದ ನಿವಾಸಿ ಎನ್ನಲಾಗಿದೆ. ಅವರು ಮಂಗಳೂರಿನ ಕಾಲೇಜೊಂದರಲ್ಲಿ ನರ್ಸಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಕಾರ್ಯಾಚರಣೆಯ ವೇಳೆ, 380 ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿದ್ದು, ಅವುಗಳಲ್ಲಿ ಕೇರಳದ ‘RAW’ ಅಧಿಕಾರಿ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಿಬ್ಬಂದಿ ಎಂದಿದ್ದ ಗುರುತಿನ ಚೀಟಿಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚುವರಿಯಾಗಿ, ಆರೋಪಿಯಿಂದ ಪಿಎಸ್‌ಐ ಸಮವಸ್ತ್ರ, ಪೊಲೀಸ್ ಶೂ, ಲೋಗೋ, ಪದಕ, ಬೆಲ್ಟ್, ಕ್ಯಾಪ್, 1 ಲ್ಯಾಪ್‌ಟಾಪ್ ಮತ್ತು 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.