Home ಮಂಗಳೂರು Mangaluru: ವಿಷಾಹಾರ ಸೇವಿಸಿ ಮಂಗಳೂರಿನ 137ಕ್ಕೂ ಹೆಚ್ಚು ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ

Mangaluru: ವಿಷಾಹಾರ ಸೇವಿಸಿ ಮಂಗಳೂರಿನ 137ಕ್ಕೂ ಹೆಚ್ಚು ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ

57
0
Mangaluru: More than 137 hostel students of Mangaluru are sick after consuming poisonous food

ಮಂಗಳೂರು:

ವಿಷಾಹಾರ ಸೇವಿಸಿ 137ಕ್ಕೂ ಹೆಚ್ಚು ಖಾಸಗಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರನಲ್ಲಿ ನಡೆದಿದೆ.

ನಗರದ ವಿವಿಧ ಆಸ್ಪತ್ರೆಗೆ ತಡರಾತ್ರಿ ಇವರನ್ನು ದಾಖಲಿಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಎಲ್ಲಾ ವಿದ್ಯಾರ್ಥಿನಿಯರನ್ನೂ 6 ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, 12 ವಿದ್ಯಾರ್ಥಿಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಕೆ.ಜಗದೀಶ್​, ಶಾಸಕ ವೇದವ್ಯಾಸ ಕಾಮತ್‌ ಅವರು ಸಿಟಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಪೋಷಕರು ಗಾಬರಿಯಿಂದ ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ.

ಇದನ್ನೂ ಓದಿ: Mangaluru: ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆ

ಸೋಮವಾರ ಮಧ್ಯಾಹ್ನ ಹಾಸ್ಟೆಲ್​​ನಲ್ಲಿ ಊಟ ಮಾಡಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಚಿಕನ್ ಕಬಾಬ್​ ಮತ್ತು ಗೀರೈಸ್​ ತಿಂದ ವಿದ್ಯಾರ್ಥಿನಿಯರಿಗೆ ವಾಂತಿ, ಬೇಧಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ರಾತ್ರಿ ವೇಳೆಗೆ ಇದು ತೀವ್ರವಾಗಿದೆ. ಭಾನುವಾರವೂ ಕೆಲವು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಆದರೆ ಸೋಮವಾರ ಅನೇಕರು ಅಸ್ವಸ್ಥರಾಗಿದ್ದಾರೆ. ಸೋಮವಾರ ಮಧ್ಯಾಹ್ನದ ಬಳಿಕ ನೂರಾರು ವಿದ್ಯಾರ್ಥಿನಿಯರು ಗೈರಾಗಿರುವುದನ್ನು ಗಮನಿಸಿ ವಿಚಾರಿಸದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿ, “ರಾತ್ರಿ 9 ಗಂಟೆ ಸುಮಾರಿಗೆ ನಗರದ ಆಸ್ಪತ್ರೆಯ ಮುಂದೆ ಸುಮಾರು 400-500 ಜನರು ಜಮಾಯಿಸಿದ್ದರು. ಅವರಲ್ಲಿ ಅನೇಕರು ವಿದ್ಯಾರ್ಥಿಗಳು ಮತ್ತು ಉಳಿದವರು ಅವರ ಕುಟುಂಬ ಸದಸ್ಯರಾಗಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆಯಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. 137 ವಿದ್ಯಾರ್ಥಿಗಳನ್ನು ನಗರದ 6 ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಹಿಂದಿನ ಕಾರಣವನ್ನು ಶೀಘ್ರದಲ್ಲೇ ಪತ್ತೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದು, ಹಾಸ್ಟೆಲ್​ಗಳಿಗೆ ತೆರಳಿ ವಿದ್ಯಾರ್ಥಿನಿಯರು ಸೇವಿಸಿದ್ದ ಆಹಾರದ ಸ್ಯಾಂಪಲ್​ಗಳನ್ನು ಸಂಗ್ರಹಿಸಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರು ಮತ್ತು ವೈದ್ಯರ ಜೊತೆಗೆ ಸಮಾಲೋಚನೆ ನಡೆಸಿದೆ.

LEAVE A REPLY

Please enter your comment!
Please enter your name here