Home ಮಂಗಳೂರು Mangaluru: ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆ

Mangaluru: ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆ

33
0
Mangaluru: More than 137 hostel students of Mangaluru are sick after consuming poisonous food
bengaluru

ಮಂಗಳೂರು:

ಕಲುಷಿತ ಆಹಾರ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ರಾಜೇಶ್ ಅವರು ಮಾಹಿತಿ ನೀಡಿದ್ದು, ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಸೋಮವಾರ ಅಸ್ವಸ್ಥಗೊಂಡಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Mangaluru: ವಿಷಾಹಾರ ಸೇವಿಸಿ ಮಂಗಳೂರಿನ 137ಕ್ಕೂ ಹೆಚ್ಚು ಹಾಸ್ಟೆಲ್​ ವಿದ್ಯಾರ್ಥಿನಿಯರು ಅಸ್ವಸ್ಥ

ಅಂತೆಯೇ ವಿದ್ಯಾರ್ಥಿನಿಯರು ಸೇವಿಸಿದ್ದ ಆಹಾರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಸುರಕ್ಷತಾ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್‌ನ ನೀರಿನ ಮಾದರಿಗಳನ್ನು ಕೂಡ ಸಂಗ್ರಹಿಸಲಾಗಿತ್ತು, ಅದರ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಹಾರ ಕಲುಷಿತಗೊಳ್ಳಲು ಕಾರಣ ಏನೆಂಬುದು ಪರೀಕ್ಷೆಯ ವರದಿ ಕೈಸೇರಿದ ಬಳಿಕವಷ್ಟೇ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here