Home ಬೆಂಗಳೂರು ನಗರ Martyr Captain Pranjal cremated| ಸಕಲ ಸರಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ

Martyr Captain Pranjal cremated| ಸಕಲ ಸರಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ

50
0
Martyr Captain Pranjal cremated

ಬೆಂಗಳೂರು:

ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರಪಾಳ್ಯ ಚಿತಾಗಾರದಲ್ಲಿ ನಡೆಯಿತು.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು.

Martyr Captain Pranjal cremated
Martyr Captain Pranjal cremated

ಯೋಧನ ಪಾರ್ಥಿವ ಶರೀರವನ್ನು ನಂದನವನ ಬಡಾವಣೆಯಿಂದ ಜಿಗಣಿಯ ಓಟಿಸಿ ಸರ್ಕಲ್, ಬನ್ನೇರುಘಟ್ಟ ಮುಖ್ಯ ರಸ್ತೆ, ನೈಸ್ ರೋಡ್ ಸಂಪರ್ಕ, ಕೋನಪ್ಪನ ಅಗ್ರಹಾರ ವೃತ್ತ, ಕೂಡ್ಲು ಗೇಟ್ ಮಾರ್ಗವಾಗಿ ಸೋಮಸುಂದರ ಪಾಳ್ಯ ಚಿತಾಗಾರಕ್ಕೆ ತರಲಾಯಿತು

ರಸ್ತೆಗಳಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಅಗಲಿದ ಯೋಧನಿಗೆ ಗೌರವ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here