Home ಬೆಂಗಳೂರು ನಗರ Martyred soldier Captain Pranjal| ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50...

Martyred soldier Captain Pranjal| ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ ಪರಿಹಾರ ಘೋಷಣೆ

39
0
Martyred soldier Captain Pranjal| Chief Minister Siddaramaiah has announced a compensation of Rs 50 lakh to family

ಬೆಂಗಳೂರು:

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

Martyred soldier Captain Pranjal| Chief Minister Siddaramaiah has announced a compensation of Rs 50 lakh to family

ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ‌ ಸಲ್ಲಿಸಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: “ನವೆಂಬರ್ 22 ರಂದು ಕಾಶ್ಮೀರದ ರಜೌರಿಯ ಕಾವಿಕೋಟ್ ಎಂಬಲ್ಲಿ ಇಬ್ಬರು ಉಗ್ರರು ಅಡಗಿದ್ದರು. ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು. ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು,” ಎಂದರು.

ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದರು.

LEAVE A REPLY

Please enter your comment!
Please enter your name here