ಬೆಂಗಳೂರು: ಕರ್ನಾಟಕದಲ್ಲಿ ತಾಯಂದಿರ ಮರಣ ಪ್ರಮಾಣವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸುಧಾರಿಸಿದೆ ಎಂದು ಬುಧವಾರ ಬಿಡುಗಡೆಯಾದ ವಿಶೇಷ ಬುಲೆಟಿನ್ ತಿಳಿಸಿದೆ. 2018-20ರ ಭಾರತದಲ್ಲಿ ತಾಯಂದಿರ ಮರಣ ಪ್ರಮಾಣ ವರದಿಯಲ್ಲಿ ಕರ್ನಾಟಕವು ಸುಧಾರಿಸಿದೆ ಎಂದು ತಿಳಿಸಿದೆ. ರಿಜಿಸ್ಟ್ರಾರ್ ಜನರಲ್ ಕಚೇರಿಯ ವರದಿಯು 2017-19ರಲ್ಲಿ 83 ರಿಂದ 2018-20ರಲ್ಲಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ (ಎಂಎಂಆರ್) ಪ್ರತಿ ಲಕ್ಷಕ್ಕೆ 69 ಆಗಿದೆ ಎಂದು ಹೇಳಿದೆ. ಕರ್ನಾಟಕದಲ್ಲಿ ತಾಯಂದಿರ ಮರಣ ಪ್ರಮಾಣ 14ರಷ್ಟು ಇಳಿಕೆಯಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕೇರಳ (19), ಗುಜರಾತ್ (57), ತೆಲಂಗಾಣ (43), ತಮಿಳುನಾಡು (54), ಆಂಧ್ರಪ್ರದೇಶ (45), ಮಹಾರಾಷ್ಟ್ರ (33) ಮತ್ತು ಜಾರ್ಖಂಡ್ (56) ನಂತಹ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಕಡಿಮೆಯಾಗಿದೆ.
ಇನ್ನೂ ಧಾರವಾಡ, ಯಾದಗಿರಿ, ಕಲಬುರಗಿ, ಬೀದರ್ ಮತ್ತು ರಾಯಚೂರಿನಲ್ಲಿ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದರು. ಧಾರವಾಡ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಯಾದಗಿರಿ, ದಾವಣಗೆರೆ, ಉಡುಪಿ, ಕಲಬುರಗಿ, ಬೀದರ್, ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಸರಾಸರಿ 69 ಕ್ಕಿಂತ ಹೆಚ್ಚು ಎಂಎಂಆರ್ ವರದಿಯಾಗಿದೆ.
ಇಲಾಖೆಯು ಮರಣ ಪ್ರಮಾಣ ದರವನ್ನು ಕಡಿಮೆ ಮಾಡಲು ಜಿಲ್ಲಾವಾರು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುತ್ತಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ ತಜ್ಞರು, ದಾದಿಯರು ಮತ್ತು ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸುವುದು ತಕ್ಷಣ ಪ್ರಮುಖ ಅವಶ್ಯಕತೆಗಳನ್ನು ಹೆಚ್ಚಿಸುವ ಕಾರ್ಯವನ್ನು ಮಾಡುತ್ತಿದೆ. ಮನೆಯಲ್ಲಿ ಹೆರಿಗೆಯನ್ನು ಮಾಡುವುದು ಕಡಿಮೆಯಾದ ಕಾರಣ ಮರಣ ಪ್ರಮಾಣವು ಕಡಿಮೆಯಾಗಿದೆ ಎಂದು ಹೇಳಲಾಗಿದೆ.
ಇದನ್ನು ಓದಿ:ಹದಿಹರೆಯದವರ ಮಾನಸಿಕ ಆರೋಗ್ಯವನ್ನು ಕಾಪಾಡಲು ಇಲ್ಲಿದೆ ಸೂಕ್ತ ಸಲಹೆ
ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಬಲವರ್ಧನೆಯಿಂದ ಮಕ್ಕಳ ಸಾವಿನ ಪ್ರಕರಣಗಳು ಕಡಿಮೆಯಾಗಿವೆ. ಈ ಬಗ್ಗೆ ಹೆಚ್ಚಿದ ಜಾಗೃತಿ, ಅದರಲ್ಲೂ ಈಗ ಹೆಣ್ಣು ಮಗುವಿಗೆ ಹೆಚ್ಚು ಹೆಚ್ಚು ಸರ್ಕಾರದ ಯೋಜನೆಗಳು ಬರುತ್ತಿದೆ. ಇದರಿಂದ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಹೇಳಿದರು.
ಹೆರಿಗೆ ಸಮಯದಲ್ಲಿ ಗರ್ಭಿಣಿಯರಿಗೆ ತುರ್ತು ಸೌಲಭ್ಯಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಅವರಿಗೆ ನೀಡುವ ಆರೋಗ್ಯ ಸೇವೆಗಳು, ವೈದ್ಯಕೀಯ ಆರೈಕೆ ಹೆಚ್ಚಾಗಿದೆ. ಸೋಂಕುಗಳ ಏರಿಕೆಯನ್ನು ನಿಯಂತ್ರಿಸುವಲ್ಲಿಯು ಆರೋಗ್ಯ ಇಲಾಖೆ ಅಗತ್ಯ ಕ್ರಮವನ್ನು ತೆಗೆದುಕೊಂಡಿದೆ ಎಂದು ಹೇಳಲಾಗಿದೆ.
ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
