Home ಬೆಳಗಾವಿ ರಾಜ್ಯದ 28 ಹೆದ್ದಾರಿಗಳ ಮೇಲ್ದರ್ಜೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಭೆ: ಸತೀಶ್...

ರಾಜ್ಯದ 28 ಹೆದ್ದಾರಿಗಳ ಮೇಲ್ದರ್ಜೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಭೆ: ಸತೀಶ್ ಜಾರಕಿಹೊಳಿ

20
0
Meeting with Union Minister Nitin Gadkari regarding upgradation of 28 highways in Karnataka: Minister Satish Jarakiholi
Meeting with Union Minister Nitin Gadkari regarding upgradation of 28 highways in Karnataka: Minister Satish Jarakiholi
Advertisement
bengaluru

ಬೆಳಗಾವಿ:

ರಾಜ್ಯದ ಕನಿಷ್ಠ 28 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ವಾರ ಸಭೆ ನಡೆಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಕರ್ನಾಟಕದ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಅಗತ್ಯ ಬಗ್ಗೆ ಈಗಾಗಲೇ ಕೇಂದ್ರ ಸಚಿವ ಗಡ್ಕರಿ ಜೊತೆ ರಾಜ್ಯ ಸರ್ಕಾರ ಸಭೆ ನಡೆಸಿದೆ ಎಂದರು.

ನಿನ್ನೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲಗಾ-ಮಾಚೆ ಬೈಪಾಸ್ ರಸ್ತೆ ಕಾಮಗಾರಿಯನ್ನು ರಸ್ತೆ ಗುತ್ತಿಗೆದಾರರು ಮಧ್ಯದಲ್ಲಿ ನಿಲ್ಲಿಸಿದ್ದರಿಂದ ಕಾಮಗಾರಿ ಅಪೂರ್ಣವಾಗಿದೆ. ಆದರೆ, ಬೈಪಾಸ್ ಕಾಮಗಾರಿಯನ್ನು ಅದೇ ಗುತ್ತಿಗೆದಾರರಿಗೆ ವಹಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಕೇಳಿಕೊಂಡಿದ್ದು, ಸಮಸ್ಯೆ ಬಗೆಹರಿದ ನಂತರ ಬೈಪಾಸ್ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

bengaluru bengaluru

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆ ಹದಗೆಟ್ಟಿದ್ದು, ಕಡಿಮೆ ಮಳೆಯಾಗಿರುವ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು. ಪರಿಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ. ಜುಲೈ 15ರ ವರೆಗೆ ಮಳೆ ಬರಲು ಸಿಎಂ ಕಾದು ನೋಡಲಿದ್ದು, ಬಳಿಕ ಬರಪೀಡಿತ ಜಿಲ್ಲೆಗಳ ಬಗ್ಗೆ ಘೋಷಣೆ ಮಾಡಲು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA), ಬೆಳಗಾವಿ ನಗರ ನಿಗಮ (BCC) ಮತ್ತು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL) ಹಗರಣಗಳ ಕುರಿತು ಪ್ರತಿಕ್ರಿಯಿಸಿದ ಅವರು, ಈ ಹಗರಣಗಳ ಬಗ್ಗೆ ಲೋಕಾಯುಕ್ತದಿಂದ ಖಾಸಗಿ ದೂರು ದಾಖಲಿಸಲಾಗಿದೆ. ಬೆಂಗಳೂರಿನಿಂದ ಕಾರ್ಯದರ್ಶಿ ಮಟ್ಟದ ಹಿರಿಯ ಅಧಿಕಾರಿಗಳು ತನಿಖೆಗಾಗಿ ಇಲ್ಲಿಗೆ ಆಗಮಿಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದರು.


bengaluru

LEAVE A REPLY

Please enter your comment!
Please enter your name here