Home ರಾಜಕೀಯ Mekedatu: ನ್ಯಾಷನಲ್ ಕಾಲೇಜು ಮೈದಾನಕ್ಕೆ ಡಿ.ಕೆ. ಶಿವಕುಮಾರ್ ಮತ್ತಿತರ ಮುಖಂಡರ ಭೇಟಿ

Mekedatu: ನ್ಯಾಷನಲ್ ಕಾಲೇಜು ಮೈದಾನಕ್ಕೆ ಡಿ.ಕೆ. ಶಿವಕುಮಾರ್ ಮತ್ತಿತರ ಮುಖಂಡರ ಭೇಟಿ

30
0
Mekadatu: Congress leader DK Shivakumar visits National college ground
bengaluru

ಬೆಂಗಳೂರು:

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಎರಡನೇ ಹಂತದ ಹೋರಾಟ ಇದೇ 27ರಂದು ರಾಮನಗರದಲ್ಲಿ ಆರಂಭವಾಗಿ ಮಾರ್ಚ್ 3ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದ ಮೂಲಕ ಮುಕ್ತಾಯಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರ ಜತೆ ನ್ಯಾಷನಲ್ ಕಾಲೇಜು ಮೈದಾನಕ್ಕೆ ಶನಿವಾರ ಭೇಟಿ ನೀಡಿ ಸಮಾವೇಶ ನಡೆಯುವ ಜಾಗ ಪರಿಶೀಲಿಸಿದರು.

Mekadatu: Congress leader DK Shivakumar visits National college ground

ಈ ಸಮಾವೇಶಕ್ಕೆ ಆಗಮಿಸುವವರ ಪ್ರಯಾಣದ ಅನುಕೂಲಕ್ಕಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಹೊಂದಿಕೊಂಡಿರುವ ಮೆಟ್ರೋ ರೈಲು ನಿಲ್ದಾಣದಿಂದ ಮೆಜೆಸ್ಟಿಕ್ ನಿಲ್ದಾಣದವರೆಗೆ ಕಾಂಗ್ರೆಸ್ ನಾಯಕರುಗಳು ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಿದರು.

bengaluru

ಸಮಾವೇಶದ ಸಮಯದಲ್ಲಿ ಅಧಿಕ ವಾಹನ ದಟ್ಟಣೆ ನಿಯಂತ್ರಿಸಲು ಸಮಾವೇಶದಲ್ಲಿ ಭಾಗವಹಿಸುವವರು ಮೆಟ್ರೋ ಮಾರ್ಗವಾಗಿ ಪ್ರಯಾಣ ಮಾಡಬೇಕು ಎಂದು ನಾಯಕರು ಮನವಿ ಮಾಡಿದರು. ಆ ಮೂಲಕ ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸುವ ಇಂಗಿತ ವ್ಯಕ್ತಪಡಿಸಿದರು.

Also Read: Congress gears up for Mekedatu ‘padayatra-II’ from Sunday

ಈ ಸಂದರ್ಭದಲ್ಲಿ ಅನೇಕ ಜನರು ಶಿವಕುಮಾರ್ ಅವರನ್ನು ಭೇಟಿ ಮಾಡಿ ಮೇಕೆದಾಟು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದರು.

bengaluru

LEAVE A REPLY

Please enter your comment!
Please enter your name here