Home ಬಳ್ಳಾರಿ ಮೇಕೆದಾಟು: ತಮಿಳ್ನಾಡಿನಿಂದ ದಾರಿ ತಪ್ಪಿಸುವ ಹುನ್ನಾರ

ಮೇಕೆದಾಟು: ತಮಿಳ್ನಾಡಿನಿಂದ ದಾರಿ ತಪ್ಪಿಸುವ ಹುನ್ನಾರ

27
0
Advertisement
bengaluru

ಬಳ್ಳಾರಿ:

ಮೇಕೆದಾಟು ಯೋಜನೆಯ ವಿಚಾರದಲ್ಲಿ ತಮಿಳುನಾಡು ರಾಜಕಾರಣ ಬೆರೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರಿದರು.

ಬಳ್ಳಾರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಯೋಜನೆ ತಮಿಳುನಾಡಿನ ಕೈಯಲ್ಲಿ ಇಲ್ಲ. ತಮಿಳು ನಾಡು ಸರ್ಕಾರವು ನಿರ್ಣಯ ಕೈಗೊಂಡು, ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ.ರಾಜ್ಯದ ನಿಲುವಿನಲ್ಲಿ, ಪ್ರಯತ್ನದಲ್ಲಿ ಹಾಗೂ ಕಾನೂನು ಹೋರಾಟದಲ್ಲಿ ಯಾವುದೇ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಳೆದ 10-12 ವರ್ಷಗಳ ಅವಧಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಉನ್ನತ ಮಟ್ಟದ ಸಮಿತಿಗಳಲ್ಲಿ ಅನುಮೋದನೆ ಪಡೆದುಕೊಂಡು, ಭೂಮಿ, ನೀರು ಹಂಚಿಕೆ ಮಾಡಿಸಿಕೊಂಡರೂ ಕೈಗಾರಿಕೆಗಳು ಸ್ಥಾಪನೆಯಾಗದೆ ಇರುವ ಹಲವು ಪ್ರಕರಣಗಳು ಗಮನದಲ್ಲಿದೆ. ಇದರಿಂದಾಗಿ ಬಹುದೊಡ್ಡ ಪ್ರಮಾಣದ ಭೂಮಿ ಬಳಕೆಯಾಗದೆ ಉಳಿದಿದೆ ಎಂದರು .

bengaluru bengaluru

ಈ ಹಿನ್ನೆಲೆಯಲ್ಲಿ ಇಂತಹ ಯೋಜನೆಗಳ ಪುನರ್ ಪರಿಶೀಲನೆ ನಡೆಸಲಾಗುವುದು. ಈ ಕಂಪೆನಿಗಳು ಕೈಗಾರಿಕೆ ಸ್ಥಾಪಿಸದೆ ಇದ್ದರೆ, ಅವರ ಹಂಚಿಕೆಯನ್ನು ರದ್ದುಪಡಿಸಿ, ಉದ್ಯೋಗ ಸೃಷ್ಟಿಗೆ ಪೂರಕವಾದ ಕೈಗಾರಿಕೆ ಸ್ಥಾಪನೆಗೆ ಮುಂದೆ ಬರುವವರಿಗೆ ಆದ್ಯತೆ ನೀಡಲಾಗುವುದು ಎಂದರು.

ತುಂಗಭದ್ರಾ ಅಣೆಕಟ್ಟೆಯಲ್ಲಿ ಹೂಳು ತೆಗೆಯಲು ಯಾವುದೇ ಕಂಪೆನಿ ಮುಂದೆ ಬಾರದ ಹಿನ್ನೆಲೆಯಲ್ಲಿ ಸಮಾನಾಂತರವಾಗಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಹಿಂದಿನ ಅವಧಿಯಲ್ಲಿ ನಿರ್ಧರಿಸಲಾಗಿತ್ತು ಅದರಂತೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯ ಡಿ.ಪಿ.ಆರ್. ಸಿದ್ಧಗೊಳಿಸಲು 20 ಕೋಟಿ ರೂ. ಬಿಡುಗಡೆ ಮಾಡಿದ್ದು ಡಿ.ಪಿ.ಆರ್. ಸಿದ್ಧವಾದ ನಂತರ ಸಂಬಂಧ ಪಟ್ಟ ರಾಜ್ಯಗಳೊಂದಿಗೆ ಸೌಹಾರ್ದಯುತವಾಗಿ ಚರ್ಚಿಸಿ, ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂಬ ವಿಶ್ವಾಸವನ್ನು ಸಿಎಂ ವ್ಯಕ್ತಪಡಿಸಿದರು.


bengaluru

LEAVE A REPLY

Please enter your comment!
Please enter your name here