Home ಕರ್ನಾಟಕ ಮೇಕೆದಾಟು ಯೋಜನೆಯಲ್ಲಿ ಯಾವುದೇ ಉಲ್ಲಂಘನೆ ಆಗಿಲ್ಲ: ಸಚಿವ ಬಸವರಾಜ್ ಬೊಮ್ಮಾಯಿ

ಮೇಕೆದಾಟು ಯೋಜನೆಯಲ್ಲಿ ಯಾವುದೇ ಉಲ್ಲಂಘನೆ ಆಗಿಲ್ಲ: ಸಚಿವ ಬಸವರಾಜ್ ಬೊಮ್ಮಾಯಿ

43
0

ರಾಜ್ಯದ ನೆಲ ಜಲ ಹಿತಾಸಕ್ತಿ ಕಾಪಾಡಲು ಹಿಂದೆ ಮುಂದೆ ನೋಡಲ್ಲ

ಬೆಂಗಳೂರು:

ಅದು ಮಹದಾಯಿ ಯೋಜನೆಯೇ ಇರಲಿ. ಮೇಕೆದಾಟು ಯೋಜನೆಯೇ ಇರಲಿ. ಯಾವುದೇ ಸಂದರ್ಭದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ರಾಜ್ಯದ ನೆಲ ಜಲ ಹಿತರಕ್ಷಣೆಗೆ ಅತ್ಯಂತ ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದೆ ಎಂದರು.

ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆ ನಡೆಸಿತ್ತು. ನ್ಯಾಯಾಲಯದ ಈ ಕ್ರಮವನ್ನು ನಮ್ಮ ಸರ್ಕಾರ ಪ್ರಶ್ನಿಸಿತ್ತು. ಈ ಪ್ರಕರಣದ ಕುರಿತು ವಿಚಾರಣೆ ನೆನ್ನೆ ನಡೆದಿದೆ. ನಮ್ಮ ಸರ್ಕಾರದ ಪರವಾಗಿ ವಕೀಲರು ಈ ಪ್ರಕರಣದಲ್ಲಿ ಅತ್ಯುತ್ತಮ ರೀತಿಯಲ್ಲಿ ವಾದ ಮಂಡಿಸಿದ್ದಾರೆ‌ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here