Home ಬೆಂಗಳೂರು ನಗರ ಜು 1ರಿಂದ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ

ಜು 1ರಿಂದ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ

44
0
Namma Metro
ಫೈಲ್ ಚಿತ್ರ

ಬೆಂಗಳೂರು:

ನಗರದಲ್ಲಿ ಅನ್‌ಲಾಕ್‌ ಪ್ರಕ್ರಿಯೆ ಆರಂಭಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಜುಲೈ 1ರಿಂದ‌ ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮೆಟ್ರೊ ರೈಲು ಸೇವೆ ಇರಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ ಸಿಎಲ್) ತಿಳಿಸಿದೆ.

ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಇರುವುದರಿಂದ ಶನಿವಾರ ಮತ್ತು ಭಾನುವಾರ ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದೂ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಜನದಟ್ಟಣೆಯ ಸಂದರ್ಭದಲ್ಲಿ ಪ್ರತಿ ಐದು ನಿಮಿಷ ಹಾಗೂ ಜನದಟ್ಟಣೆ ಇಲ್ಲದಾಗ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ. ಆದರೆ, ಪ್ರಯಾಣಿಕರ ದಟ್ಟಣೆಯನ್ನು ಅವಲಂಬಿಸಿ, ಪ್ರಕಟಣೆ ಹೇಳಿದೆ.

LEAVE A REPLY

Please enter your comment!
Please enter your name here