Home ಉತ್ತರ ಕನ್ನಡ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಬೆಳಗಾವಿಯಿಂದ ಮಿಲಟರಿ ಪಡೆ ಆಗಮನ

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಬೆಳಗಾವಿಯಿಂದ ಮಿಲಟರಿ ಪಡೆ ಆಗಮನ

16
0

ಕಾರವಾರ:  ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಗುಡ್ಡ ಕುಸಿದು 10 ಜನರು ಸಾವನ್ನಪ್ಪಿದ್ದು, ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ಭರದಿಂದ ಸಾಗಿದೆ. ಈಗಾಗಲೇ 7 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಾಲ್ವರಿಗಾಗಿ ಶೋಧ ನಡೆಯುತ್ತಿದೆ.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇಂದು ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ ಪಡೆ ಆಗಮಿಸಿದೆ. ಬೆಳಗಾವಿಯಿಂದ ಮಿಲಿಟರಿ ಪಡೆ ಆಗಮಿಸಿದ್ದು, ಮಣ್ಣಿನಡಿ ಸಿಲುಕಿಕೊಂಡಿರುವವರ ರಕ್ಷಣಾಕಾರ್ಯಾಚರಣೆ ನಡೆಸಲಾಗುತ್ತಿದೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಮಾನ್ಯ ಮಿಲಿಟರಿ ಪಡೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು , ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಮಿಲಿಟರಿ ಪಡೆಯನ್ನು ಕಳುಹಿಸಿದ್ದು ಈ ಪಡೆಯು ಶಿರೂರಿಗೆ ತಲುಪಿದೆ.

 

LEAVE A REPLY

Please enter your comment!
Please enter your name here