Home ಮೈಸೂರು ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಫೋಟೋಗೆ ಹಾಲಿನ ಅಭಿಷೇಕ

ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಫೋಟೋಗೆ ಹಾಲಿನ ಅಭಿಷೇಕ

177
0
Milk anointing for Siddaramaiah's photo in Siddaramahundi
Milk anointing for Siddaramaiah's photo in Siddaramahundi

ಮೈಸೂರು:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದ್ದು, ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.

ಸಿದ್ದರಾಮಯ್ಯ ಅವರ ಬೆಂಬಲಿಗರು ಸಿದ್ದರಾಮನ ಹುಂಡಿಯಲ್ಲಿ ಮತ್ತು ಬೆಂಗಳೂರಿನಲ್ಲಿರುವ ಅವರ ನಿವಾಸದ ಮುಂದೆ ಅವರ ಪೋಸ್ಟರ್‌ಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರ ಜೊತೆ ಜಾತ್ರೆಯಲ್ಲಿ ವೀರಕುಣಿತ ಮಾಡಿದ್ದ ಕರಗೇಗೌಡರವರು ಸಿದ್ದರಾಮನ ಹುಂಡಿಯಲ್ಲಿ ವೀರ ಕುಣಿತ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಜೊತೆ ವೀರ ಕುಣಿತ ಮಾಡಲು ಸಿದ್ದವಾಗುತ್ತಿದ್ದೇನೆ. ಫಲಿತಾಂಶ ಬಂದ ದಿನದಿಂದ ಟೆನ್ಸನ್ ಇತ್ತು. ಈಗ ತುಂಬಾ ಖುಷಿಯಾಗಿದೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಮಧ್ಯೆ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಮೌನ ಮುರಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅವರು, ಸಿಎಂ ಆಯ್ಕೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. “ಪ್ರಸ್ತುತ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜತೆ ಚರ್ಚೆ ನಡೆಸುತ್ತಿದ್ದಾರೆ. ಮುಂದಿನ 48-72 ಗಂಟೆಗಳಲ್ಲಿ ನಾವು ಕರ್ನಾಟಕದಲ್ಲಿ ಹೊಸ ಸಂಪುಟ ರಚಿಸುತ್ತೇವೆ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here