ಬೆಂಗಳೂರು:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಸಚಿವ ಸಿ.ಸಿ.ಪಾಟೀಲ್ ಅವರು ಇಂದು ನಗರದ ಇನ್ ಫೆಂಟ್ರಿ ರಸ್ತೆಯಲ್ಲಿರುವ ಇಲಾಖೆಯ ಕೇಂದ್ರ ಕಚೇರಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರು ಸ್ವಾಗತಿಸಿದರು. ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಲಾಖೆ ಕುರಿತು ಆಯುಕ್ತರು ಸಚಿವರಿಗೆ ಮಾಹಿತಿ ನೀಡಿದರು.
ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಾರ್ತಾ ಮತ್ತು ಪ್ರಸಾರ ಇಲಾಖೆಯ ಕೇಂದ್ರ ಕಚೇರಿಗೆ ಭೇಟಿ ಕೊಟ್ಟು ಮಹಾತ್ಮಾ ಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.. ನಂತರ ನಡೆದ ಇಲಾಖಾ ಸಭೆಯಲ್ಲಿ ಪಾಲ್ಗೊಂಡ ಸಂದರ್ಭ.. pic.twitter.com/srD5dYuw6Y
— C C Patil (@CCPatilBJP) January 30, 2021
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾನ್ಯ ನೂತನ ಸಚಿವ ಶ್ರೀ ಸಿ.ಸಿ.ಪಾಟೀಲ್ ಅವರು ಇಂದು ಬೆಂಗಳೂರಿನ ಇನ್ ಫೆಂಟ್ರಿ ರಸ್ತೆಯ ಇಲಾಖೆಯ ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಆಯುಕ್ತರಾದ ಶ್ರೀ ಡಾ.ಪಿ.ಎಸ್.ಹರ್ಷ ಸ್ವಾಗತಿಸಿದರು. ಮಾನ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಲಾಖೆ ಕುರಿತು ಆಯುಕ್ತರು ಮಾಹಿತಿ ನೀಡಿದರು. pic.twitter.com/vLWCviRQbY
— DIPR Karnataka (@KarnatakaVarthe) January 30, 2021