Minister Lakshmi Hebbalkar protested against Center in an innovative way by holding a rice basket
ಬೆಳಗಾವಿ:
ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ವಿನೂತನ ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೈಯಲ್ಲಿ ಅಕ್ಕಿ ಬುಟ್ಟಿ ಹಿಡಿದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲು ನಿರಾಕರಿಸಿರುವುದು ಖಂಡನೀಯ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ರಾಜ್ಯದ ಜನರಿಗೆ ನಾವು ನೀಡಿದ್ದ 5 ಗ್ಯಾರಂಟಿ ಭರವಸೆಯನ್ನು ಈಡೇರಿಸುತ್ತೇವೆ. ಪ್ರಮುಖವಾಗಿ ಅನ್ನಭಾಗ್ಯ ಯೋಜನೆಯಡಿ 10ಕೆ ಜಿ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಆರಂಭದಲ್ಲಿ ಅಕ್ಕಿ ವಿತರಣೆ ಮಾಡುವುದಾಗಿ ಹೇಳಿದ್ದ ಎಫ್ ಸಿಐ ನಂತರ ಅಕ್ಕಿ ನೀಡಲು ಆಗಲ್ಲ ಎಂದಿದೆ. ರಾಜ್ಯಕ್ಕೆ ನೀಡಬೇಕಿದ್ದ ಅಕ್ಕಿಯನ್ನು ಕೊಡದೇ ಕೇಂದ್ರ ಸರ್ಕಾರ ಓಪನ್ ಮಾರುಕಟ್ತೆಯಲ್ಲಿ 15 ಲಕ್ಷ ಟನ್ ಮಾರಾಟಕ್ಕೆ ನೀಡಿದೆ. ಕೇಂದ್ರ ಸರ್ಕಾರ ಅಕ್ಕಿ ವಿತರಣೆಗೆ ತಡೆ ನೀಡಿದ್ದು, ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾಮೃಣಾಲು.
ಬಡವರ ಊಟಕ್ಕಾಗಿ ಅಕ್ಕಿ ನೀಡುವ ವಿಚಾರದಲ್ಲಿಯೂ ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟಿಸುತ್ತಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಮೃಣಾಲ ಹೆಬ್ಬಾಳ್ಕರ್, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ, ಶಾಸಕ ರಾಜು ಸೇಠ್, ಪಾಲಿಕೆ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.
