Home ಕರ್ನಾಟಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭೇಟಿ ಮಾಡಿ ಗೋಹತ್ಯೆ ಕಾಯ್ದೆ ಕುರಿತು ಚರ್ಚೆ ನಡೆಸಿದ ಸಚಿವ ಪ್ರಭು...

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭೇಟಿ ಮಾಡಿ ಗೋಹತ್ಯೆ ಕಾಯ್ದೆ ಕುರಿತು ಚರ್ಚೆ ನಡೆಸಿದ ಸಚಿವ ಪ್ರಭು ಚವ್ಹಾಣ್

55
0

ಉತ್ತರಪ್ರದೇಶ:

ಉತ್ತರಪ್ರದೇಶದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅತ್ಯಂತ ಕಠಿಣವಾಗಿ ಜಾರಿ ಗೊಳಿಸಲಾಗಿದ್ದು ಕರ್ನಾಟಕದಲ್ಲಿಯೂ ಗೋಹತ್ಯೆ ನಿಷೇಧ ತರಲು ಉದ್ದೇಶಿಸಿರುವುದಕ್ಕೆ ಉತ್ತರಪ್ರ ದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಸ ವ್ಯಕ್ತಪಡಿಸಿದ್ದಾರೆ.

ಗುಜರಾತ್ ಮತ್ತು ಉತ್ತರಪ್ರದೇಶದ ಪ್ರವಾಸದಲ್ಲಿರುವ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಉತ್ತರ ಪ್ರದೇಶದ ಭೇಟಿಯ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಮಾಡಿ ಗೋಹತ್ಯೆ ನಿಷೇಧ ಕಾಯ್ದೆಯ ಕುರಿತಾಗಿ ಸುಧೀರ್ಘವಾಗಿ ಚರ್ಚೆ ನಡೆಸಿದರು.ಉತ್ತರಪ್ರದೇಶದಲ್ಲಿ ಗೋಹತ್ಯೆಗೆ ಸಂಬಂಧ ಪಟ್ಟಂತೆ ಅತ್ಯಂತ ಕಠಿಣ ಕ್ರಮಗಳನ್ನು ಜರುಗಿಸಲಾಗಿದ್ದು ಗೋಹತ್ಯೆ ನಿಷೇಧ ಯಶಸ್ವಿಯಾಗಿ ಜಾರಿಯಲ್ಲಿದೆ ಅಲ್ಲದೇ ಕರ್ನಾಟಕ ಸರ್ಕಾರ ಕೂಡ ಇದೇ ಮಾದರಿಯಲ್ಲಿ ಕಾಯ್ದೆ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ ಆಶಯ ವ್ಯಕ್ತಪಡಿಸಿದರು.

ಗೋಹತ್ಯೆ ಕಾಯ್ದೆ ಉತ್ತರಪ್ರದೇಶದಲ್ಲಿ ಅನುಷ್ಠಾನವಾದ ರೀತಿಯ ಬಗ್ಗೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗ ಳೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಿದರು.ಈ ಸಂಧರ್ಭದಲ್ಲಿ ಗೋಶಾಲೆಗಳ ನಿರ್ವಹಣೆ ಮತ್ತು ಗೋವುಗಳ ಆರೈಕೆಯ ಬಗ್ಗೆ ಸಹ ಸಚಿವರು ಮಾಹಿತಿ ಪಡೆದರು.ಉತ್ತಮ ದೇಶಿ ಗೋವು ತಳಿಗಳ ಅಭಿವೃದ್ಧಿಯ ಕುರಿತು ಉತ್ತ ರಪ್ರದೇಶ ಪಶುಸಂಗೋಪನೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು ಅತ್ಯುತ್ತಮ ಉತ್ಪಾದನಾ ಸಾಮರ್ಥ್ಯ ಹೊಂದಿದ ಸಾಹಿವಾಲ್ ತಳಿಯ ಎರಡು ಹೋರಿಗಳು ಹಾಗೂ ಹತ್ತು ಹಸುಗಳ ನ್ನು ಕರ್ನಾಟಕ ರಾಜ್ಯಕ್ಕೆ ಒದಗಿ ಸಲು ಹಿರಿಯ ಅಧಿಕಾರಿಗಳು ಒಪ್ಪಿಗೆ ಸೂಚಿಸಿರುತ್ತಾರೆ.

ಇದೆ ವೇಳೆ ಉತ್ತರಪ್ರದೇಶದ ರವಣಖೇಡ ಬುಲ್ ಫಾರ್ಮ್ ಹಾಗೂ ಸಾಹಿವಾಲ್ ಅಂಬ್ಯುಲರ್ ಟ್ರಾನ್ಸಫರ್ ಟೆಕ್ನಾಲಜಿ ಕ್ಷೇತ್ರಗಳಿಗೆ ಸಚಿವರು ಭೇಟಿ ನೀಡಿದರು.

LEAVE A REPLY

Please enter your comment!
Please enter your name here