ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಪ್ರಕಟಣೆಯಲ್ಲಿ ನೀಡಿರುವ ಅರ್ಜಿ ಲಿಂಕ್ ಮೂಲಕ ನವೆಂಬರ್ 10ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
