ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2026 ವಿಜೇತೆ ಸಾಧ್ವಿ ಸತೀಶ್ ಸೈಲ್ ಡಿಕೆ ಶಿವಕುಮಾರ್ ಭೇಟಿ
ಬೆಂಗಳೂರು: ಒಡಿಶಾದ ಭುವನೇಶ್ವರದಲ್ಲಿ ನಡೆದ ಪ್ರತಿಷ್ಠಿತ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2026 ಸೌಂದರ್ಯ ಸ್ಪರ್ಧೆಯಲ್ಲಿ ಕಿರೀಟ ಮುಡಿಗೇರಿಸಿಕೊಂಡ ಕಾರವಾರದ ಯುವತಿ ಸಾಧ್ವಿ ಸತೀಶ್ ಸೈಲ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಸಾಧ್ವಿ ಅವರು ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿಯಾಗಿದ್ದು, ಈ ಭೇಟಿ ಸಂದರ್ಭದಲ್ಲಿ ಅವರು ತಮ್ಮ ತಂದೆಯೊಂದಿಗೆ ಹಾಜರಿದ್ದರು.
ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದಿರುವ ಸಾಧ್ವಿಗೆ ಉಪಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಪ್ರಯತ್ನಗಳಿಗೆ ಶುಭಾಶಯ ಕೋರಿದರು.
