Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • MLA Basanagouda Patil Yatnal | ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಪ್ರಚೋದಿಸುತ್ತಿದೆ
  • ರಾಜಕೀಯ
  • ಬೆಂಗಳೂರು ನಗರ

MLA Basanagouda Patil Yatnal | ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಪ್ರಚೋದಿಸುತ್ತಿದೆ

Vighnesh Pawar October 4, 2023 6:30 PM 1 minute read
MLA Basanagouda Patil Yatnal | Siddaramaiah's government is inciting Muslims

MLA Basanagouda Patil Yatnal | Siddaramaiah's government is inciting Muslims

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಕೇರಳ, ಕಾಶ್ಮೀರ ಇಸ್ಲಾಮಿಕ್ ರಾಜ್ಯವಾದ ಮಾದರಿಯಲ್ಲೇ ಕರ್ನಾಟಕದಲ್ಲೂ ಅದೇ ವಾತಾವರಣ ಸೃಷ್ಟಿ ಮಾಡಲು ಮುಸ್ಲಿಮರನ್ನು ಪ್ರಚೋದನೆ ಮಾಡುವ ಕೆಲಸ ಸಿದ್ದರಾಮಯ್ಯರ ಸರಕಾರ ಇವತ್ತು ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಲೋಕಸಭಾ ಚುನಾವಣೆ ಸಲುವಾಗಿ ಯಾವನೋ ಒಬ್ಬ ಅರೆಹುಚ್ಚನನ್ನು ಪ್ರಧಾನಿ ಮಾಡಬೇಕೆಂದು ಈ ಹುಚ್ಚರು ಕೂಡಿ ದೇಶ ಹಾಳು ಮಾಡಲು ಮುಂದಾಗಿದ್ದಾರೆ. ಇದಕ್ಕೆ ಈ ದೇಶದ ಜನರು ಅವಕಾಶ ಕೊಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿಂದೂ, ಸನಾತನ ಧರ್ಮದ ಕುರಿತು ಡೆಂಗ್ಯೂ, ಮಲೇರಿಯಾ ಎನ್ನುವವರು ಕ್ರಾಸ್‍ಬ್ರೀಡ್‍ಗಳು, ಹಂದಿಮಿಶ್ರಿತ ಜರ್ಸಿ ಆಕಳಿನಂತೆ ಎಂದು ಟೀಕಿಸಿದರು. ಇದು ಅತಿರೇಕ ಆಗುತ್ತಿದೆ. ಇನ್ನು ಮುಂದೆ ನಡೆಯುವುದಿಲ್ಲ ಎಂದು ನುಡಿದರು.

ರಾಜ್ಯದಲ್ಲಿ 11 ಕಡೆ ಗಣೇಶ ಚತುರ್ಥಿ ಕಾರ್ಯಕ್ರಮಕ್ಕೆ ಹೋಗಿದ್ದೇನೆ. ಹಿಂದೂಗಳಿಂದ ಕಲ್ಲೆಸೆತ, ಚಾಕು, ಚೂರಿ ಪ್ರದರ್ಶನ ನಡೆದಿಲ್ಲ. ಪ್ರಚೋದನೆಯ ಘೋಷಣೆ ಕೇಳಿಲ್ಲ. ಆದರೆ, ಶಾಂತಿ ಸಂದೇಶ ಕೊಡುವ ಧಾರ್ಮಿಕ ಕಾರ್ಯಕ್ರಮದಲ್ಲಿ ನಮ್ಮೆಲ್ಲರನ್ನು ನಾಶ ಮಾಡುವುದಾಗಿ, ರಕ್ತ ಕುಡಿಯುವುದಾಗಿ ತಿಳಿಸಿದ್ದಾರೆ. ಇದು ಖಂಡನೀಯ ಎಂದರು.

ಒಂದಿಷ್ಟು ಜನರು ಅಟ್ಟಹಾಸದಿಂದ ಮೆರೆಯಬೇಕಿದ್ದರೆ ಈ ಸರಕಾರ ಹಿಂದೂಗಳ ರಕ್ಷಣೆ ಮಾಡುತ್ತಿದೆಯೇ ಎಂದು ಕೇಳಿದರು. ಪ್ರಿಯಾಂಕ್ ಖರ್ಗೆಗೆ ನಾಚಿಕೆ ಆಗಬೇಕು. ಖರ್ಗೆಯವರು ಇದಕ್ಕೆ ಉತ್ತರ ಕೊಡಬೇಕು. ಹಿಂದೂಗಳ, ಸನಾತನದ ಬಗ್ಗೆ ಬಂದರೆ ಇವರು ಅಪ್ಪ- ಮಗ ಕೂಡಿ ಹೇಳಿಕೆ ಕೊಡುತ್ತಾರೆ. ಕೋಲಾರದಲ್ಲಿ ತಮ್ಮ ಸಮುದಾಯದ ಸಂಸದರ ವಿರುದ್ಧ ಎಸ್ಪಿ ಉದ್ಧಟತನದಿಂದ ವರ್ತಿಸಿದರೆ, ಕುತ್ತಿಗೆ ಪಟ್ಟಿ ಹಿಡಿದು ಹೊರಹಾಕಿದರೆ ಖರ್ಗೆ ಮಾತನಾಡಿಲ್ಲ. ಇದನ್ನು ತಾಲಿಬಾನಿ ಸರಕಾರ ಎನ್ನದಿರಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ತಾಲಿಬಾನ್ ಸರಕಾರ ಅಧಿಕಾರ ವಹಿಸಿಕೊಂಡಂತಾಗಿದೆ ಎಂದು ತಿಳಿಸಿದರು. ಇವತ್ತು ನಡೆಯುತ್ತಿರುವ ಘಟನೆಗಳಿಂದ ಕರ್ನಾಟಕದಲ್ಲಿ ಹಿಂದೂಗಳ ರಕ್ಷಣೆ ಮಾಡುವವರು ಯಾರು ಎಂಬ ಪ್ರಶ್ನೆ ಉದ್ಭವಿಸಲು ಕಾರಣವಾಗಿದೆ ಎಂದು ತಿಳಿಸಿದರು.

ಹೊಸ ಸರಕಾರ ಬಂದ ಬಳಿಕ ಮತಾಂಧ ಮುಸ್ಲಿಂ ಯುವಕರು ಪಾಕಿಸ್ತಾನದ ಪರ ಘೋಷಣೆ ಕೂಗುವುದು, ನಮ್ಮ ದೇವಸ್ಥಾನಗಳ ಮುಂದೆ ಗೋವಿನ ತಲೆ ತಂದಿಡುವುದು ಹೆಚ್ಚಾಗಿದೆ. ಇನ್ನು ಮೇಲೆ ನಮ್ಮ ಸರಕಾರ ಇದೆ; ಮುಸ್ಲಿಂ ಸರಕಾರ ಇದೆ. ನಮಗೆ ಯಾರೂ ಏನೂ ಮಾಡುವುದಿಲ್ಲ ಎಂಬ ಸ್ಥಿತಿ ಬಂದಿದೆ ಎಂದರು.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಂಭಾವ್ಯ ಗಲಭೆÉಯ ಪೂರ್ಣ ಮಾಹಿತಿ ಪೊಲೀಸ್ ಇಲಾಖೆಗೆ ಇತ್ತು. ಅನುಮತಿ ಇಲ್ಲದೆ ಬೃಹತ್ ಖಡ್ಗ ಪ್ರತಿಷ್ಠಾಪಿಸಿದ್ದಾರೆ. ಅಖಂಡ ಭಾರತದ ನಕ್ಷೆಯಲ್ಲಿ ಹಸಿರು ಬಣ್ಣ ಬಳಿದು ಔರಂಗಜೇಬನನ್ನು ವೈಭವೀಕರಿಸಿದ್ದಾರೆ. ಇಷ್ಟೆಲ್ಲ ಆಗಲು ಪೊಲೀಸ್ ಇಲಾಖೆ ಬಿಟ್ಟಿದ್ಯಾಕೆ ಎಂದು ಕೇಳಿದರು.

ಗೃಹ ಸಚಿವರ ಬಗ್ಗೆ ಹಿಂದೆ ಗೌರವ ಇತ್ತು. ಅವರು ಈ ಬಾರಿ ಸಚಿವರಾದ ಬಳಿಕ ನೀಡುತ್ತಿರುವ ಹೇಳಿಕೆಗಳು ಅವರ ವೈಫಲ್ಯವನ್ನು ತೋರಿಸುತ್ತವೆ. ಇದನ್ನು ಕ್ಷುಲ್ಲಕ ಘಟನೆ ಎನ್ನುತ್ತಾರೆ; ಸಹಜವಾಗಿ ನಡೆಯುತ್ತವೆ ಎನ್ನುತ್ತಾರೆ. ಒಬ್ಬ ಎಸ್ಪಿಯನ್ನೇ ಹೊಡೆಯಲು ಬರುವ ಪರಿಸ್ಥಿತಿ ನಿರ್ಮಾಣವಾದರೆ ಪೊಲೀಸರಲ್ಲಿ ನೈತಿಕ ಬಲ ಉಳಿಯಲು ಸಾಧ್ಯವೇ? ಪೊಲೀಸರಲ್ಲಿ ಲಾಠಿ ಇದೆ, ರಿವಾಲ್ವರ್, ಶಸ್ತ್ರಾಸ್ತ್ರಗಳಿದ್ದರೂ ಕಲ್ಲೆಸೆತ ಕಂಡರೂ ಮೌನ ಪ್ರೇಕ್ಷಕರಾದುದು ಯಾಕೆ? ಅವರಿಗೆ ಅಧಿಕಾರ ಕೊಟ್ಟಿಲ್ಲವೇ ಎಂದು ಗೃಹ ಸಚಿವರು ಹೇಳಲಿ ಎಂದು ಒತ್ತಾಯಿಸಿದರು.

ಭಯೋತ್ಪಾದಕ ಘಟನೆ ಕುಕ್ಕರ್ ಬ್ಲಾಸ್ಟ್ ಆದಾಗ ಬಂಧಿತರನ್ನು ಇನ್ನೊಸೆಂಟ್ ಬ್ರದರ್ಸ್ ಎಂದಿದ್ದ ಪುಣ್ಯಾತ್ಮನಿಗೆ ನಾಚಿಕೆ ಆಗುವುದಿಲ್ಲವೇ? ಎಂದು ಕೇಳಿದರು. ಕರ್ನಾಟಕದಲ್ಲಿ ಐಸಿಸ್ ಚಟುವಟಿಕೆಯನ್ನು ಪ್ರತಿಷ್ಠಾಪಿಸಲು ಪ್ರಯೋಗ ನಡೆದಿದೆ ಎಂದು ಎನ್‍ಐಎ ಹೇಳಿದೆ. ಹುಬ್ಬಳ್ಳಿಯಲ್ಲಿ ನಿನ್ನೆ ದೆಹಲಿ ಪೊಲೀಸರು 3 ಜನರನ್ನು ಬಂಧಿಸಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗಿ ಒಬ್ಬ ಪೊಲೀಸನ ಕತ್ತನ್ನು ಮುರಿದು, ಮಹಿಳಾ ಪೊಲೀಸ್ ಮೇಲೆ ದೌರ್ಜನ್ಯ, ಠಾಣೆಗೆ ಬೆಂಕಿ ಹಾಕಿದ ಪ್ರಕರಣ ವಾಪಸ್ ಪಡೆಯಲು ಸಚಿವರೇ ಪತ್ರ ಬರೆದಿದ್ದಾರೆ. ಈ ರೀತಿ ಆದರೆ ಪೊಲೀಸರು ಕೆಲಸ ಮಾಡಲು ಸಾಧ್ಯವೇ ಎಂದು ಕೇಳಿದರು.

ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ನಡೆದ ದಲಿತ ಶಾಸಕನ ಮನೆ ಮೇಲಿನ ಬೆಂಕಿ ಪ್ರಕರಣವನ್ನೂ ವಾಪಸ್ ಪಡೆಯಲು ಮುಂದಾಗಿದ್ದಾರೆ. ನೀವು ಕೇವಲ ಮುಸ್ಲಿಮರ ಮತದಿಂದಲೇ ಅಧಿಕಾರಕ್ಕೆ ಬಂದಿದ್ದೀರಾ? ಮುಸ್ಲಿಮರಿಗಷ್ಟೇ ಸಬ್ಸಿಡಿ ನೀಡುತ್ತಿದ್ದೀರಲ್ಲವೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ, ಶಾಸಕ ಅರವಿಂದ ಬೆಲ್ಲದ್, ಮಾಜಿ ಶಾಸಕ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಅ. ದೇವೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

About the Author

Vighnesh Pawar

Subscriber

View All Posts

Post navigation

Previous: Karnataka DCM DK Shivakumar | ಸ್ಥಗಿತವಾಗಿರುವ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪುನರಾರಂಭಕ್ಕೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Next: Karnataka Housing Minister Zameer Ahmed Khan | ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಗೃಹ ಮಂಡಳಿ ವತಿಯಿಂದ ಇಂಟಿಗ್ರೇಟೆಡ್ ಟೌನ್ ಶಿಪ್

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.