Home ರಾಜಕೀಯ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ನೇಮಕ

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ನೇಮಕ

106
0
MLA MP Renukacharya and DN Jeevraj appointed as chief minister's political secretaries
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಎಂ ಪಿ ರೇಣುಕಾಚಾರ್ಯ ಹಾಗೂ ಡಿ.ಎನ್. ಜೀವರಾಜ್ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಅರ್ಪಿಸಿದರು. ಈ ಸಂದರ್ಭದಲ್ಲಿ ರೇಣುಕಾಚಾರ್ಯ ಅವರ ಅಭಿಮಾನಿಗಳು ಹಾಜರಿದ್ದರು.

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ರಾಜಕೀಯ ಕಾರ್ಯದರ್ಶಿಗಳ ಸ್ಥಾನಗಳು ತೆರವಾಗಿದ್ದವು. ಶಾಸಕ ಎಂ.ಪಿ. ರೇಣುಕಾಚಾರ್ಯ, ಡಿ.ಎನ್. ಜೀವರಾಜ್ ಇಬ್ಬರೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಳೆಯದಲ್ಲಿ ಗುರುತಿಸಿಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರೂ ಯಡಿಯೂರಪ್ಪ ಅವರ ಆಪ್ತ ಬಳಗಕ್ಕೆ ಸೇರಿದವರು. ಈ ಹಿನ್ನೆಲೆಯಲ್ಲಿ ಇವರಿಬ್ಬರು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಾತಿಯಾಗಿದ್ದಾರೆ.

ಎಂ.ಪಿ. ರೇಣುಕಾಚಾರ್ಯ ಅವರು ಹಿಂದೆಯೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

LEAVE A REPLY

Please enter your comment!
Please enter your name here