ಬೆಂಗಳೂರು:
ಕೇರಳಕ್ಕೆ ಮೇ 31 ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಈ ಕಾರಣದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 5 ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶಿಸುವ ನಿರೀಕ್ಷೆ ಇದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಹೇಳಿದೆ.
ಇನ್ನು ರಾಜ್ಯದ್ಲಲಿ ನಾಳಿನ ವರೆಗೂ ಕೆಲವು ಕಡೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.