Home ಕರ್ನಾಟಕ Moral Policing in Karkal: ನೈತಿಕ ಪೊಲೀಸ್ ಗಿರಿ ಪ್ರಕರಣ 5 ಮಂದಿ ಬಂಧನ

Moral Policing in Karkal: ನೈತಿಕ ಪೊಲೀಸ್ ಗಿರಿ ಪ್ರಕರಣ 5 ಮಂದಿ ಬಂಧನ

29
0
Moral Police in Karkal: 5 arrested
Moral Police in Karkal: 5 arrested

ಕಾರ್ಕಳ:

ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ವರದಿಯಾಗಿದ್ದು ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.

ಜು.29 ರಂದು ಈ ಘಟನೆ ನಡೆದಿದ್ದು, ತಡವಾಗಿ ವರದಿಯಾಗಿದೆ. ಬೇರೆ ಕೋಮಿಗೆ ಸೇರಿದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಮಹಿಳಾ ಉಪನ್ಯಾಸಕರು ಕಾರಿನಲ್ಲಿ ತೆರಳುತ್ತಿದ್ದಾಗ ಈ 5 ಮಂದಿ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದು, ಪ್ರಶ್ನೆ ಮಾಡಿ ಕಿರುಕುಳ ನೀಡಿದ್ದಾರೆ.

ಸಂತೋಷ್ ನಂದಲಿಕೆ (29) ಕಾರ್ತಿಕ್ ಪೂಜಾರಿ (23) ಸುನಿಲ್ ಮೂಲ್ಯ (28) ಸಂದೀಪ್ ಪೂಜಾರಿ (30) ಸುಜಿತ್ ಸಫಲಿಗ (28) ಬಂಧನಕ್ಕೊಳಗಾಗಿದ್ದ ಆರೋಪಿಗಳಾಗಿದ್ದಾರೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್​ ಗಿರಿ; ವರದಿಗಾರನ ಮೇಲೆ ಹಲ್ಲೆ ಯತ್ನ, ಇಬ್ಬರ ಬಂಧನ

ಕುಂತಲಪಾಡಿಯಲ್ಲಿ ಕಾರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದ ಬಗ್ಗೆ ಮಾಹಿತಿ ಬಂದ ಕೂಡಲೇ ಕಾರ್ಕಳ ಡಿವೈಎಸ್ ಪಿ ಅರವಿಂದ್ ಕಳಗುಜ್ಜಿ ಹಾಗೂ ತಂಡದ ಪೊಲೀಸ್ ಅಧಿಕಾರಿಗಳು 5 ಮಂದಿಯನ್ನು ಬಂಧಿಸಿದ್ದಾರೆ.

ಮಹಿಳಾ ಉಪನ್ಯಾಸಕಿಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಚಿಕ್ಕಮಗಳೂರಿನ ಕಳಸಾದಿಂದ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ. 5 ಮಂದಿಯನ್ನು ಬಂಧಿಸಿದ ನಂತರ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜಾಮೀನಿನ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.

LEAVE A REPLY

Please enter your comment!
Please enter your name here