ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ; ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ
ಬೆಂಗಳೂರು :
ನಮ್ಮ ಸರ್ಕಾರ “ಸರ್ವರಿಗೂ ಸಮಪಾಲು” ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ , 2023 ನೇ ಸಾಲಿನ ಹಜ್ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಹಜ್ ಸಮಿತಿ ವತಿಯಿಂದ ಆಯೋಜಿಸಿದ್ದ 2023ನೇ ಸಾಲಿನ ಹಜ್ ವಿಮಾನಯಾನ ಯಾತ್ರೆಯನ್ನು ಮುಖ್ಯಮಂತ್ರಿ @siddaramaiah ಅವರು ಉದ್ಘಾಟಿಸಿದರು.
— CM of Karnataka (@CMofKarnataka) June 6, 2023
ಅಮೀರೇ ಶಿರಿಯತ್ ಕರ್ನಾಟಕದ ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಸಾಹೆಬ್ ಮತ್ತು ವಿಜಯಪುರದ ಅಲ್ ಹಶ್ಮಿ ಟ್ರಸ್ಟ್ ಅಧ್ಯಕ್ಷರಾದ ಮೌಲಾನಾ ಮಫ್ತಿ ಇಫ್ತಿಕಾರ್ ಅಹಮದ್ ಖಶ್ಮಿ ಸಾಹೆಬ್,… pic.twitter.com/tgX1kF4B6j
ನಮ್ಮ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲಾ ಧರ್ಮ, ಎಲ್ಲಾ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ.
ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರ್ಕಾರ ನಮ್ಮದು. ನಮ್ಮ ನಾಡು ಮತ್ತು ನಮ್ಮ ದೇಶ ಸುಭಿಕ್ಷವಾಗಿ ಪ್ರಗತಿಯ ಮಾರ್ಗದಲ್ಲಿ ಸಾಗಲಿ, ನಮ್ಮ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್ ಯಾತ್ರಿಗಳು ಪ್ರಾರ್ಥಿಸಿ ಎಂದು ನಿವೇದಿಸಿಕೊಂಡರು.