ಮಂಗಳೂರು:
ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ನಿನ್ನೆ ರಾತ್ರಿ ವೇಳೆ ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿತ್ತು. ಈ ಸಂಬಂಧವಾಗಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳ ಬಂಧಿಸಿದ್ದಾರೆ. ಅಳಪೆ ನಿವಾಸಿ ದೀಕ್ಷಿತ್ (32) ಹಾಗೂ ಲಾಯ್ಡ್ ಪಿಂಟೋ (32) ಬಂಧಿತರು ಆಗಿದ್ದಾರೆ.
ಅವರು ನೈತಿಕ ಪೊಲೀಸ್ಗಿರಿ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಲಾಗಿತ್ತು. ಬೀಚ್ ತೆರಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಬಂದು ಹಲ್ಲೆ ನಡೆಸಿದ್ದರು.
ಮಂಗಳೂರಿನ ಪ್ರತಿಷ್ಠಿತ ಎ.ಜೆ. ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್ ನ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ಒಟ್ಟೊಟ್ಟಿಗೆ ವಿಹಾರಕ್ಕೆ ತೆರಳಿದ್ದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟು 6 ಮಂದಿ ವಿಹಾರಕ್ಕೆ ತೆರಳಿದ್ದರು. ಆದರೆ, ಈ ವೇಳೆ ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ತೆರಳಿದ್ದ 4 ಮಂದಿ ವಿದ್ಯಾರ್ಥಿನಿಯರು (ಯುವತಿಯರು) ತೆರಳಿದ್ದರು. ಇದರಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದು ತಂಡವೊಂದು ಅನ್ಯಕೋಮಿನ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿತ್ತು. ಇನ್ನು ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಹಲ್ಲೆಗೊಳಗಾದ ವಿದ್ಯಾರ್ಥಿ ಆಗಿದ್ದಾನೆ.
ಗಾಯಗೊಂಡ ಹಫೀಜ್ ಪೊಲೀಸರಿಗೆ ದೂರು ನೀಡಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.