ಬೆಂಗಳೂರು: ಹಾಸ್ಟೆಲ್ ಊಟ ಸೇವಿಸಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸ್ಟ್ರೇ ಮಾಡುತ್ತಿದ್ದರು. ಇಲಿ ಪಾಷಾಣದ ವಾಸನೆಯಿಂದ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಇಲಿಪಾಷಾಣದ ಪರಿಣಾಮದಿಂದ ವಿದ್ಯಾಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖಾಸಗಿ ನರ್ಸಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ.
ನರ್ಸಿಂಗ್ ಹಾಸ್ಟೆಲ್ ಕಟ್ಟಡದ ನೆಲ ಮಹಡಿಯಲ್ಲಿ ಊಟದ ಹಾಲ್ ಇದೆ. ವಿದ್ಯಾರ್ಥಿಗಳು ಊಟ ಮಾಡಲು ಹಾಲ್ಗೆ ಬಂದ ವೇಳೆಯೇ ಇಲಿ ಪಾಷಾಣ ಸಿಂಪಡಣೆ ಮಾಡಲಾಗುತ್ತಿತ್ತು. ಈ ವೇಳೆ ಏನು ತೊಂದರೆ ಆಗುವುದಿಲ್ಲ ಎಂದು ಊಟ ಮುಗಿಸಿ ವಿದ್ಯಾರ್ಥಿಗಳು ತೆರಳಿದ್ದರು. ಆದರೆ ಸ್ವಲ್ಪ ಹೊತ್ತಿನಲ್ಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.