ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಸಿರೀಕರಣ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ “ಹಸಿರು ಬೆಂಗಳೂರು” ಕಾರ್ಯಕ್ರಮದಡಿ 2023-24ನೇ ಸಾಲಿನಲ್ಲಿ 90 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದೆ.
2023-24ನೇ ಸಾಲಿನಲ್ಲಿ ಬೆಂಗಳೂರು ನಗರವನ್ನು ಹಸಿರುಗೊಳಿಸುವ ಸಂಬಂಧ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರ ಆಶಯದಂತೆ “ಹಸಿರು ಬೆಂಗಳೂರು ಕಾರ್ಯಕ್ರಮದಡಿ ಬೆಂಗಳೂರಿನಾದ್ಯಂತ ಗಿಡಗಳನ್ನು ಬೆಳೆಸಲು ಕ್ರಮ ಕೈಗೊಳ್ಳಲಾಗಿರುತ್ತದೆ.
ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಸುಮಾರು 250 ಸರ್ಕಾರಿ/ಸರ್ಕಾರೇತರ ಶಾಲೆಗಳಿಂದ ಒಡಂಬಡಿಕೆ ಮಾಡಿಕೊಂಡು ಸುಮಾರು 50,000 ಶಾಲಾ/ಕಾಲೇಜು ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ. ವಿದ್ಯಾರ್ಥಿಗಳ
ಬಿಬಿಎಂಪಿ ಅರಣ್ಯ ಘಟಕದ ವತಿಯಿಂದ ನೆಡಲಾದ ಗಿಡಗಳನ್ನು 03 ವರ್ಷಗಳ ಕಾಲ ಶಾಲಾ ವಿದ್ಯಾರ್ಥಿಗಳ ಹಾಗೂ ಅರಣ್ಯ ಅಧಿಕಾರಿಗಳ ಸಹಯೋಗದೊಂದಿಗೆ ಪೋಷಣೆ ಮಾಡಲಾಗುವುದು. ಈ ಸಂಬಂಧ ಪಾಲಿಕೆ ವತಿಂದ ಸಾಮಾಜಿಕ ಜಾಲತಾಣವನ್ನು ರೂಪಿಸಿ ನಗರದಾದ್ಯಂತ ನೆಡಲಾಗಿರುವ ಗಿಡಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಗುವುದು.
ನಗರದಲ್ಲಿ ಈಗಾಗಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ವಲಯವಾರು ನೆಟ್ಟಿರುವ ಗಿಡಗಳ ಸಂಖ್ಯೆ, ಶಾಲಾ/ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಬಗ್ಗೆ ಜಾಲತಾಣದಲ್ಲಿ ಮಾಹಿತಿ ನೀಡಲಾಗುವುದು. ಜೊತೆಗೆ ಸಿಎಂಪಿ ಅರಣ್ಯ ಘಟಕದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕಲಿಗೆ ಉಚಿತವಾಗಿ ಗಿಡಗಳನ್ನು ಸಹ ವಿತರಿಸಲಾಗಿರುತ್ತದೆ.