ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸುತ್ತಿದ್ದಂತೆಯೇ, ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಯೂ ಹುಟ್ಟುಕೊಂಡಿದೆ.
ಪಕ್ಷ ಗೆಲುವಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪಾತ್ರ ಮಹತ್ವದ್ದಾಗಿದ್ದು, ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಆಕಾಂಕ್ಷಿಗಳಾಗಿದ್ದಾರೆ.
ಇದನ್ನೂ ಚುನಾವಣಾ ಪ್ರಚಾರಕ್ಕೂ ಮುನ್ನವೇ ಆಗಾಗ್ಗೆ ಉಭಯ ನಾಯಕರು ಹೇಳುತ್ತಾ ಬಂದಿದ್ದರು. ಇದೀಗ ಚುನಾವಣಾ ಫಲಿತಾಂಶ ಬರುತ್ತಿದ್ದಂತೆಯೇ ಸಿಎಂ ಯಾರು ಆಗಬೇಕು ಎಂಬುದರ ಬಗ್ಗೆ ಉಭಯ ನಾಯಕರ ಪರ ಬೆಂಬಲಿಗರು ಹೇಳುತ್ತಿದ್ದಾರೆ.
#WATCH | Bengaluru | #KarnatakaElectionResults | "…As a common man, as a brother of DK Shivakumar, I will be the happiest person if he becomes the Chief Minister," says Congress MP DK Suresh. pic.twitter.com/m27wZRcPj7
— ANI (@ANI) May 13, 2023
ಈ ಮಧ್ಯೆ ಎಎನ್ ಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಸಂಸದ ಡಿಕೆ ಸುರೇಶ್, ಒಬ್ಬ ಸಾಮಾನ್ಯ ವ್ಯಕ್ತಿ ಹಾಗೂ ಸಹೋದರನಾಗಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಹೆಚ್ಚು ಸಂತೋಷಪಡುತ್ತೇನೆ ಎಂದರು.
ಮತ್ತೊಂದೆಡೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂಬುದು ರಾಜ್ಯದ ಜನರ ಇಚ್ಚೆಯಾಗಿದೆ ಎಂದು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದರು.