Home ಅಪರಾಧ Most wanted Naxal Angadi Suresh arrested who had been on run for...

Most wanted Naxal Angadi Suresh arrested who had been on run for 21 years| 21 ವರ್ಷದಿಂದ ತಪ್ಪಿಸಿಕೊಂಡಿದ್ದ ಮೋಸ್ಟ್ ವಾಂಟೆಂಡ್ ನಕ್ಸಲ್ ಅಂಗಡಿ ಸುರೇಶ್‌ʼನನ್ನ ಹಿಡಿದ ಕಾಡಾನೆ

28
0
Most wanted Naxal Angadi Suresh arrested who had been on run for 21 years

ಚಿಕ್ಕಮಗಳೂರು: 21 ವರ್ಷದಿಂದ ಭೂಗತನಾಗಿ ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಮೋಸ್ಟ್ ವಾಂಟೆಂಡ್ ನಕ್ಸಲ್ ಅಂಗಡಿ ಸುರೇಶ್ ಕಾಡಾನೆಯಿಂದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ‌.

ಸುರೇಶ್ ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದವನು. 2003ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಸುರೇಶ್ ಕಳೆದ 21 ವರ್ಷಗಳಿಂದ ನಾಪತ್ತೆಯಾಗಿದ್ದ. ಕರ್ನಾಟಕ, ಕೇರಳ ಮತ್ತು ತಮಿಳುನಾಡು ಪೊಲೀಸರು ಈ ಮೋಸ್ಟ್ ವಾಂಟೆಡ್ ನಕ್ಸಲ್‌ಗಾಗಿ ಹುಡುಕಾಡುತ್ತಿದ್ದರು. ಆದರೆ ಕಳೆದ 21 ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದು, ಇದೀಗ ಕಾಡಾನೆಯಿಂದ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ

ನಕ್ಸಲ್ ಸುರೇಶ್‌ನ ಮೂಲ ಹೆಸರು ಪ್ರದೀಪ್. ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಬಳಿಕ ಸುರೇಶ್ ಎಂದು ಬದಲಿಸಿಕೊಂಡಿದ್ದನು. ಸುರೇಶ್ ಅಲಿಯಾಸ್ ಪ್ರದೀಪ್ ಕರ್ನಾಟಕ ಕೇಡರ್ ನಕ್ಸಲ್ ಆಗಿ ಗುರುತಿಸಿಕೊಂಡಿದ್ದನು. ಇವರೆಗೂ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ಸುರೇಶ್ ಮೇಲೆ ದಾಖಲಾಗಿವೆ

LEAVE A REPLY

Please enter your comment!
Please enter your name here