ಬೆಂಗಳೂರು:
ನಗರದ ಮೈಕೋಲೇಔಟ್ ಠಾಣಾ ವ್ಯಾಪ್ತಿಯಲ್ಲಿ ದೈಹಿಕ ಚಿತ್ರಹಿಂಸೆ ನೀಡಿ 10 ವರ್ಷದ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕನ ತಾಯಿ, ರೌಡಿ ಶೀಟರ್ ಸುನೀಲ್ ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ಕುರಿತು ಬಾಲಕ ಪ್ರಶ್ನಿಸಿದ್ದಕ್ಕೆ ಚಿತ್ರಹಿಂಸೆ ನೀಡಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಲೆ ಪ್ರಕರಣದಲ್ಲಿ ಬಾಲಕನ ತಾಯಿ, ರೌಡಿಶೀಟರ್ ಹಾಗೂ ಆತನ ಪ್ರೇಯಸಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.