ಬೆಳಗಾವಿ :
ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಸವೇಶ್ವರ ವೃತ್ತದಲ್ಲಿ ಇಂದು ಜಗಜ್ಯೋತಿ ಶ್ರೀ ಬಸವಣ್ಣನವರ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಶ್ರೀ @Siddaramaiah ಅವರು ಹಾಗೂ ನಾನು ಲೋಕಾರ್ಪಣೆಗೊಳಿಸಿದೆವು. 12ನೇ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯ ಕಿಡಿ ಹೊತ್ತಿಸಿದ ಬಸವಣ್ಣನವರ ಸಿದ್ಧಾಂತಗಳು ಎಲ್ಲ ಕಾಲಕ್ಕೂ ಅಗತ್ಯ. pic.twitter.com/9lN1dA29mI
— DK Shivakumar (@DKShivakumar) August 11, 2023
ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು. ಜಡಗಟ್ಟಿದ ಸಮಾಜವನ್ನು ಸಕ್ರಿಯಗೊಳಿಸಿ, ಮಾನವೀಯತೆಯುಳ್ಳ ಹೊಸ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು ಎಂದರು ತಿಳಿಸಿದರು.
ನಾವೆಲ್ಲರೂ ನುಡಿದಂತೆ ನಡೆಯಬೇಕು ಎಂಬ ವಿಚಾರವನ್ನು ಬಸವಾದಿ ಶರಣರು ನಮ್ಮ ಸಮಾಜಕ್ಕೆ ನೀಡಿದರು. ಈ ವಿಚಾರದಲ್ಲಿ ನಂಬಿಕೆಯಿರುವ ನಮ್ಮ ಸರ್ಕಾರ ನುಡಿದಂತೆ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಗೃಹಜ್ಯೋತಿ, , ಶಕ್ತಿ, ಅನ್ನಭಾಗ್ಯ, ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಸುಮಾರು 30 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದರು.
ಮುಖ್ಯಮಂತ್ರಿ @siddaramaiah ಅವರು ಅಥಣಿಯ ಬಸವೇಶ್ವರ ಸರ್ಕಲ್ ಬಳಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣಗೊಳಿಸಿದರು.
— CM of Karnataka (@CMofKarnataka) August 11, 2023
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ @DKShivakumar ಅವರು ಸೇರಿದಂತೆ ಹಲವು ಮಂದಿ ಸಚಿವರು, ಶಾಸಕರು ಉಪಸ್ಥಿತರಿದ್ದರು. pic.twitter.com/f3CrUcFb64